ರಾಣೆಬೆನ್ನೂರು: ತಾಲ್ಲೂಕಿನ ಸುಣಕಲ್ಲಬಿದರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡದ ಹೊಸಹಳ್ಳಿ ಗ್ರಾಮದ ನಿವಾಸಿ ಮಲ್ಲಪ್ಪ ಚಾಪೇರ (70) ಗುರುವಾರ ನಿಧನರಾದರು.

ಬದು ನಿರ್ಮಾಣ ಕೆಲಸದ ಸ್ಥಳದಲ್ಲಿ ಗುರುವಾರ ಬೆಳಿಗ್ಗೆ 6 ಗಂಟೆಗೆ ನರೇಗಾ ನಿಯಮಗಳ ಪ್ರಕಾರ ಮೊದಲ ಜಿ.ಪಿ. ಎಸ್ ಮಾಡಿಸುವಾಗ ಹೃದಯಘಾತವಾಯಿತು ಎಂದು ಮಹಾತ್ಮಾಗಾಂಧೀಜಿ ಜಿಲ್ಲಾ ಕೂಲಿ ಕಾರ್ಮಿಕರ ಸಂಘಟನೆ ಪ್ರತಿನಿಧಿಗಳು ತಿಳಿಸಿದ್ದಾರೆ. ಚಿಕಿತ್ಸೆಗೆಂದು ಬ್ಯಾಡಗಿ ಮತ್ತು ಹಾವೇರಿ ಸರ್ಕಾರಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

ಈ ಘಟನೆ ಬಗ್ಗೆ ಜಿಲ್ಲಾ ಸಂಘಟನೆ ಮೂಲಕ ಸಂಬಂಧಿಸಿದ ಮೇಲಧಿಕಾರಿಗಳು ಮತ್ತು ಬ್ಯಾಡಗಿ ಕ್ಷೇತ್ರದ ಶಾಸಕರ ಗಮನಕ್ಕೆ ತರಲಾಗಿದೆ. ಕಾರ್ಮಿಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ನರೇಗಾ ಜಿಲ್ಲಾ ಕಾರ್ಮಿಕರ ಸಂಘಟನೆ ಮುಖಂಡರು ಆಗ್ರಹ ಪಡಿಸಿದ್ದಾರೆ.

ಗದಗ: ನಗರದ ನಿವಾಸಿ ಡಾ.ಸಿದ್ಧಲಿಂಗೇಶ ಶಿವಾನಂದ ಪಟ್ಟಣಶೆಟ್ಟರ (36) ಗುರುವಾರ ಹೃದಯಾಘಾತದಿಂದ ನಿಧನರಾದರು.

ಅವರಿಗೆ ತಂದೆ, ತಾಯಿ, ಸಹೋದರಿ ಇದ್ದಾರೆ. ಮೃತರ ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ 11 ಗಂಟೆಗೆ ಅಂಜುಮನ್ ಪಾಲಿಟೆಕ್ನಿಕ್ ಕಾಲೇಜು ಹತ್ತಿರದ ಜಮೀನಿನಲ್ಲಿ ಜರುಗಲಿದೆ.

ಮೃತರು ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿ ಶಿವಾನಂದ .ಎಸ್. ಪಟ್ಟಣಶೆಟ್ಟರ ಅವರ ಪುತ್ರ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-22-1503434370

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.