ಹಾವೇರಿ: ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ನಡುರಸ್ತೆಯಲ್ಲೇ ಯುವಕರ ನಡುವೆ ಮಾರಾಮಾರಿ ನಡೆದಿದ್ದು, ಈ ಘಟನೆಯಿಂದ ಜನರು ಆತಂಕಗೊಂಡಿದ್ದಾರೆ.

ರೌಡಿಪಟ್ಟಿಯಲ್ಲಿ ಹೆಸರಿದೆ ಎನ್ನಲಾದ ಸುನೀಲ ಎಂಬಾತ ಮದ್ಯದ ಅಮಲಿನಲ್ಲಿ ಯುವಕರ ಜೊತೆ ಗಲಾಟೆ ಮಾಡಿದ್ದು, ಈ ದೃಶ್ಯವನ್ನು ಸ್ಥಳೀಯರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಇದೇ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

‘ಮಾರುಕಟ್ಟೆ ಪ್ರದೇಶದಲ್ಲಿ ದ್ವಿಚಕ್ರ ವಾಹನಗಳನ್ನು ಅಡ್ಡ ನಿಲ್ಲಿಸಿರುವ ಸುನೀಲ ಹಾಗೂ ಇತರರು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಜೀವ ಬೆದರಿಕೆ ಸಹ ಹಾಕಿಕೊಂಡಿದ್ದಾರೆ’ ಎಂದು ಸ್ಥಳೀಯರೊಬ್ಬರು ತಿಳಿಸಿದರು.

‘ಪಟ್ಟಣದಲ್ಲಿ ರೌಡಿಗಳ ಹಾವಳಿ ಹೆಚ್ಚಾಗಿದೆ. ನಡುರಸ್ತೆಯಲ್ಲೇ ಯುವಕರು ಮಾರಾಮಾರಿ ನಡೆಸಿದರೂ ಪೊಲೀಸರು ಕ್ರಮ ಕೈಗೊಂಡಿಲ್ಲ. ಪೊಲೀಸರು ಮೌನವಾಗಿರುವುದರಿಂದ ಮೇಲಿಂದ ಮೇಲೆ ಇಂಥ ಘಟನೆಗಳು ನಡೆಯುತ್ತಿವೆ’ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.