ಹಾವೇರಿ: ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ಉಂಟಾಗುವ ಕುಡಿಯುವ ನೀರಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಸಹಾಯವಾಣಿ (08375-232522) ಸ್ಥಾಪಿಸಲಾಗಿದ್ದು, ಸಾರ್ವಜನಿಕರು ಕರೆ ಮಾಡಿ ದೂರು ದಾಖಲಿಸಬಹುದು.

‘ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ, ಕುಡಿಯುವ ನೀರಿನ ಅಗತ್ಯ ವ್ಯವಸ್ಥೆ ಕಲ್ಪಿಸಲು ಹಾಗೂ ಸಾರ್ವಜನಿಕರಿಗೆ ನೀರಿನ ಸಮಸ್ಯೆ ನಿವಾರಿಸಲು ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಸಹಾಯವಾಣಿ ಸ್ಥಾಪಿಸಲಾಗಿದೆ’ ಎಂದು ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಉಪ ವಿಭಾಗದ ಪ್ರಕಟಣೆ ತಿಳಿಸಿದೆ.

‘ಹಾವೇರಿ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ತೊಂದರೆಯಾದಲ್ಲಿ ಸಹಾಯವಾಣಿಗೆ ಕರೆ ಮಾಡಿ ದೂರು ಸಲ್ಲಿಸಬಹುದು. ಜೂನ್ 15ರವರೆಗೂ ಸಹಾಯವಾಣಿ ಕಾರ್ಯನಿರ್ವಹಿಸಲಿದೆ. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆವರೆಗೆ ಸಹಾಯವಾಣಿಗೆ ಕರೆ ಮಾಡಬಹುದು. ಅದರ ನಿರ್ವಹಣೆಗೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ’ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-22-1855508840

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.