ಹಾವೇರಿ: ‘ನಿವೃತ್ತ ಸೇನಾ ಮುಖ್ಯಸ್ಥ ನರವಣೆ ಆತ್ಮಚರಿತ್ರೆ ಪುಸ್ತಕ ಬಗ್ಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಲೋಕಸಭಾ ಸದನದಲ್ಲಿ ಚರ್ಚಿಸಲು ಮುಂದಾದರೆ, ಅವಕಾಶ ಕಲ್ಪಿಸದಿರುವುದು ದುರ್ದೈವದ ಸಂಗತಿ. ಪಕ್ಷಾತೀತವಾಗಿ ಇರಬೇಕಾದ ಸ್ಪೀಕರ್ ಓಂ ಬಿರ್ಲಾ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ’ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ದೂರಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲೋಕಸಭೆಯಲ್ಲಿ ಚರ್ಚೆಗೆ ಅವಕಾಶ ನೀಡದಿರುವುದು ಕೇಂದ್ರ ಸರ್ಕಾರ ದೊಡ್ಡ ಷಡ್ಯಂತ್ರವಾಗಿದೆ. ಪುಸ್ತಕವನ್ನು ಸದನಕ್ಕೆ ತಂದರೂ ಅದರ ಬಗ್ಗೆ ಚರ್ಚೆ ಮಾಡಲು ಬಿಟ್ಟಿಲ್ಲ. ಅಶಿಸ್ತಿನ ನೆಪದಲ್ಲಿ ಕಾಂಗ್ರೆಸ್ಸಿನ ಏಳೆಂಟು ಸಂಸದರನ್ನು ಅಮಾನತು ಮಾಡಿದ್ದಾರೆ’ ಎಂದು ಕಿಡಿಕಾರಿದರು.

‘ಕೇಂದ್ರ ಸರ್ಕಾರವು ಇ.ಡಿ., ಐ.ಟಿ., ಸಿಬಿಐ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡಂತೆ, ಸ್ಪೀಕರ್ ಅವರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಸ್ಪೀಕರ್ ವಿರುದ್ದ ಅವಿಶ್ವಾಸ ನಿರ್ಣಯ ಮಂಡನೆ ಮಾಡಲಾಗಿದೆ. ರಾಹುಲ್ ಗಾಂಧಿ ಅವರಿಗೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಮಾತನಾಡಲು ಅವಕಾಶ ಕೊಡುತ್ತಿಲ್ಲ. ರಾಹುಲ್ ಗಾಂಧಿ ಮೇಲೆ ದೌರ್ಜನ್ಯ ಮಾಡಲಾಗುತ್ತಿದೆ. ಜನಪರ ಹೋರಾಟ ಮಾಡಲು ಅವಕಾಶ ಕೊಡುತ್ತಿಲ್ಲ’ ಎಂದು ಆರೋಪಿಸಿದರು.

ಬಜೆಟ್ ಬಳಿಕ ಸಂಪುಟ ವಿಸ್ತರಣೆ: ‘ಬಜೆಟ್ ಬಳಿಕ ಸಚಿವ ಸಂಪುಟ ಪುನಾರಚನೆಯಾಗುವ ನಿರೀಕ್ಷೆ ಇದೆ. ಸಂಪುಟದ ಶೇ. 50ರಷ್ಟು ನಾಯಕರಿಗೆ ಪಕ್ಷ ಸಂಘಟನೆಗೆ ಅವಕಾಶ ಕೊಡುತ್ತಾರೆ. ಹೊಸಬರಿಗೆ ಅವಕಾಶ ನೀಡುತ್ತಾರೆ. ಈಗ ಬಜೆಟ್ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಬರುವ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಳ್ಳೆಯ ಬಜೆಟ್ ಕೊಡುವ ವಿಶ್ವಾಸ ಇದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.