ಸವಣೂರು (ಹಾವೇರಿ): ‘ಜಿಲ್ಲೆಯಲ್ಲಿ ಅಕ್ರಮವಾಗಿ ಗೋವು ಸಾಗಾಟ, ಗೋವು ಹತ್ಯೆ ನಡೆಯುತ್ತಿದ್ದರೂ ಪೊಲೀಸರು ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ಆರೋಪಿಸಿ ಹಿಂದೂಪರವಾದ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪೊಲೀಸ್ ಠಾಣೆ ಎದುರು ಮಂಗಳವಾರ ದಿಢೀರ್ ಪ್ರತಿಭಟನೆ ನಡೆಸಿದರು.

ಸವಣೂರು ಪೊಲೀಸ್ ಠಾಣೆ ಎದುರು ಜಮಾಯಿಸಿದ್ದ ಪದಾಧಿಕಾರಿಗಳು, ‘ಗೋಹತ್ಯೆ ಮಾಡುವವರನ್ನು ಪತ್ತೆ ಮಾಡಿ ಕಠಿಣ ಶಿಕ್ಷೆ ವಿಧಿಸಬೇಕು. ಗೋವುಗಳನ್ನು ರಕ್ಷಿಸಬೇಕು’ ಎಂದು ಒತ್ತಾಯಿಸಿದರು.

‘ಗೋವು ಹತ್ಯೆ ತಡೆಯುವಂತೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ, ಜಿಲ್ಲೆಯಲ್ಲಿ ಗೋವು ಹತ್ಯೆ ಪ್ರಕರಣಗಳು ಯಥಾಸ್ಥಿತಿ ಮುಂದುವರಿದಿವೆ. ಇದರಿಂದ, ಹಿಂದೂ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟಾಗುತ್ತಿದೆ’ ಎಂದು ಆರೋಪಿಸಿದರು.

‘ಸವಣೂರಿನ ವಿವಿಧ ಭಾಗಗಳಲ್ಲಿ ಕಾನೂನು ಬಾಹಿರವಾಗಿ ಹಸು, ಎತ್ತು ಸೇರಿದಂತೆ ರೈತರ ಕೃಷಿ ಚಟುವಟಿಕೆಗಳಿಗೆ ನೆರವಾಗುವ ದನ-ಕರುಗಳನ್ನು ಹತ್ಯೆ ಮಾಡಲಾಗುತ್ತಿದೆ. ಪೊಲೀಸ್ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಸ್ಥಳಕ್ಕೆ ಬರಬೇಕು. ಅಲ್ಲಿಯವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ’ ಎಂದು ಪ್ರತಿಭಟನಕಾರರು ಪಟ್ಟು ಹಿಡಿದಿದ್ದರು. ಡಿವೈಎಸ್ಪಿ ಗುರುಶಾಂತಪ್ಪ ಕೆ.ವಿ. ಸ್ಥಳಕ್ಕೆ ಬಂದರೂ ಪ್ರತಿಭಟನಕಾರರು ಪ್ರತಿಭಟನೆ ಹಿಂಪಡೆದಿರಲಿಲ್ಲ.

ಸ್ಥಳಕ್ಕೆ ಬಂದ ಹೆಚ್ಚುವರಿ ಎಸ್.ಪಿ. ಎಲ್.ವೈ. ಶಿರಕೋಳ, ‘ಗೋವು ಹತ್ಯೆ ಹಾಗೂ ಅಕ್ರಮ ಗೋವು ಸಾಗಾಟ ತಡೆಯಲು ವಿಶೇಷ ತಂಡ ರಚಿಸಲಾಗಿದೆ. ವಿವಿಧ ಕಡೆಗಳಲ್ಲಿ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಸಂಘಟನೆಗಳ ಸಹಕಾರದೊಂದಿಗೆ ಮಾಹಿತಿ ಸಂಗ್ರಹಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ, ಪುರಸಭೆ ಅಧಿಕಾರಿಗಳ ಮೂಲಕ ಪಟ್ಟಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಸಾಯಿಖಾನೆಗಳ ಪರಿಶೀಲನೆಯನ್ನೂ ನಡೆಸಲಾಗುವುದು’ ಎಂದು ಭರವಸೆ ನೀಡಿದರು.

ಅವರ ಮಾತಿಗೆ ಒಪ್ಪಿದ ಪ್ರತಿಭಟನಕಾರರು, ‘ಮುಂದಿನ ಎರಡು ದಿನಗಳಲ್ಲಿ ಗೋವು ಸಾಗಾಟ ಅಥವಾ ಗೋವು ಹತ್ಯೆ ತಡೆಯಬೇಕು. ಎಲ್ಲಿಯಾದರೂ ಅಂಥ ಪ್ರಕರಣಗಳು ಕಂಡುಬಂದರೆ, ಗಂಭೀರ ಸ್ವರೂಪದ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿ ಪ್ರತಿಭಟನೆ ಹಿಂಪಡೆದರು.

ಮುಖಂಡರಾದ ಗಂಗಾಧರ ಬಾಣದ, ಮಹೇಶ ಸಾಲಿಮಠ, ಜಯತೀರ್ಥ ದೇಶಪಾಂಡೆ, ಶಿವಪುತ್ರಪ್ಪ ಕಲಕೋಟಿ, ಮಹೇಶ ಮುದಗಲ್, ಹನುಮಂತಗೌಡ ಮುದಿಗೌಡ್ರ, ಧರಿಯಪ್ಪಗೌಡ ಪಾಟೀಲ, ಪ್ರವೀಣ ಚರಂತಿಮಠ, ಶ್ರೀನಿವಾಸ ಗಿತ್ತೆ, ಸಂತೋಷ ಗುಡಿಸಾಗರ, ಪ್ರವೀಣ ಬಾಲೆಹೊಸೂರ, ಬಸನಗೌಡ ಕೊಪ್ಪದ, ಶಮಿತ್ ಕೆಮ್ಮಣಕೇರಿ, ಮಹೇಶ ಜಡಿ, ಶಂಕರ ಪಾಟೀಲ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-22-1334820357

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.