ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ ಜಿಲ್ಲೆಗೆ 6 ನೂತನ ವಸತಿ ಶಾಲೆ ಮಂಜೂರು : ಗೋವಿಂದ ಕಾರಜೋಳ

Last Updated 7 ಮಾರ್ಚ್ 2020, 11:36 IST
ಅಕ್ಷರ ಗಾತ್ರ

ಹಾವೇರಿ: ಹಾವೇರಿಗೆ 137 ಕೋಟಿ ವೆಚ್ಚದಲ್ಲಿ 6 ನೂತನ ವಸತಿ ಶಾಲೆಗಳನ್ನು ಮಂಜೂರು ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಹಾವೇರಿ ಜಿಲ್ಲೆಯ ದೂದಿಹಳ್ಳಿ ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿಚೆನ್ನಮ್ಮ ವಸತಿ ಶಾಲಾ ಆವರಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಜಿಲ್ಲೆಯ ಹಿರೇಕೆರೂರ ಮತ್ತು ರಟ್ಟಿಹಳ್ಳಿ ತಾಲೂಕಿನ 88 ಕೆರೆಗಳನ್ನು ತುಂಗಭದ್ರಾ ನದಿಯಿಂದ ನೀರನ್ನು ಎತ್ತಿ ಸರ್ವಜ್ಞ ಕೆರೆ ತುಂಬಿಸುವ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆಕಾರ್ಯಕ್ರಮದಲ್ಲಿ ಮಾತನಾಡಿದರು.

ಆರ್ಥಿಕವಾಗಿ ಹಿಂದುಳಿದ ಮಕ್ಕಳ ಶಿಕ್ಷಣ ನೀಡಿಕೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. 43 ಲಕ್ಷ ಮಕ್ಕಳಿಗೆ ಶಿಷ್ಯವೇತನವನ್ನು SC/ST ಇಲಾಖೆಯಿಂದ ನೀಡಲಾಗುತ್ತದೆ. 2309 ಹಾಸ್ಟೆಲ್ ಗಳು 826 ವಸತಿ ಶಾಲೆಗಳು ಒಟ್ಟು 4 ಲಕ್ಷ ವಿದ್ಯಾರ್ಥಿಗಳು ವಸತಿ ಶಿಕ್ಷಣ ಪಡೆಯುತ್ತಿದ್ದಾರೆ. ಹಿರೇಕೆರೂರಿನ ದೂದಿಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿಗಳುಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT