ಹಾವೇರಿ: ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತರಗತಿಗಳು ಸೋಮವಾರದಿಂದ ಆರಂಭಗೊಂಡಿದ್ದು, ಇದರ ನಡುವೆಯೇ ಶಿಕ್ಷಕರ ಕೊರತೆ ಕಾಡುತ್ತಿದೆ. ಜಿಲ್ಲೆಯಲ್ಲಿ 1,741 ಶಿಕ್ಷಕರ ಹುದ್ದೆಗಳು ಖಾಲಿಯಿದ್ದು, ಇದರಿಂದಾಗಿ ಲಭ್ಯವಿರುವ ಶಿಕ್ಷಕರ ಮೇಲೆಯೇ ಕೆಲಸದ ಒತ್ತಡ ಹೆಚ್ಚಾಗುತ್ತಿದೆ. ಇದು, ಮಕ್ಕಳ ಗುಣಮಟ್ಟದ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತಿದೆ.

ಕಾಯಂ ಶಿಕ್ಷಕರ ಕೊರತೆ ಇರುವುದರಿಂದ, ಅವರ ಸ್ಥಾನಕ್ಕೆ ತಾತ್ಕಾಲಿಕವಾಗಿ ಬರುವ ಅತಿಥಿ ಶಿಕ್ಷಕರಿಗಾಗಿ ಮಕ್ಕಳು ಕಾಯುವ ಸ್ಥಿತಿಯು ಜಿಲ್ಲೆಯಲ್ಲಿ ನಿರ್ಮಾಣವಾಗಿದೆ. ಜಿಲ್ಲೆ ಮಾತ್ರವಲ್ಲದೇ ರಾಜ್ಯದಾದ್ಯಂತ ಶಿಕ್ಷಕರ ಕೊರತೆಯಿದೆ. ಸರ್ಕಾರ ಕಾಯಂ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸದಿರುವುದರಿಂದ, ಮಕ್ಕಳ ಕಲಿಕೆಗೆ ಹಿನ್ನೆಡೆಯಾಗುವ ಆತಂಕವಿರುವುದಾಗಿ ಪೋಷಕರು ದೂರುತ್ತಿದ್ದಾರೆ.

ಜಿಲ್ಲೆಯಲ್ಲಿ 1,120 ಸರ್ಕಾರಿ ಪ್ರಾಥಮಿಕ ಶಾಲೆಗಳು ಹಾಗೂ 163 ಸರ್ಕಾರಿ ಪ್ರೌಢಶಾಲೆಗಳಿವೆ. ಈ ಶಾಲೆಗಳಲ್ಲಿ ಕೆಲಸ ಮಾಡಲು 7,370 ಶಿಕ್ಷಕರ ಹುದ್ದೆಗಳನ್ನು ಮಂಜೂರು ಮಾಡಲಾಗಿದೆ. ಸದ್ಯ 5,629 ಶಿಕ್ಷಕರು ಮಾತ್ರ ಕೆಲಸ ಮಾಡುತ್ತಿದ್ದಾರೆ. ಉಳಿದ 1,741 ಶಿಕ್ಷಕರ ಹುದ್ದೆಗಳು ಹಲವು ವರ್ಷಗಳಿಂದ ಖಾಲಿ ಉಳಿದಿವೆ.

‘ಜಿಲ್ಲೆಯ ಪ್ರಾಥಮಿಕ ಶಾಲೆಗಳಲ್ಲಿ 6,074 ಶಿಕ್ಷಕರು ಇರಬೇಕು. ಆದರೆ, ಕೇವಲ 4,704 ಶಿಕ್ಷಕರು ಕೆಲಸ ಮಾಡುತ್ತಿದ್ದಾರೆ. 1,370 ಹುದ್ದೆಗಳು ಇಂದಿಗೂ ಖಾಲಿಯಿವೆ. ಸರ್ಕಾರಿ ಪ್ರೌಢಶಾಲೆಗಳಲ್ಲಿ 1,296 ಶಿಕ್ಷಕರ ಹುದ್ದೆಗಳ ಪೈಕಿ 925 ಶಿಕ್ಷಕರು ಮಾತ್ರ ಕೆಲಸದಲ್ಲಿದ್ದಾರೆ. 271 ಶಿಕ್ಷಕರ ಕೊರತೆಯಿದೆ’ ಎಂದು ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ಹೇಳಿದರು.

ಹಾನಗಲ್ ತಾಲ್ಲೂಕಿನಲ್ಲಿ 314 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಸವಣೂರು ತಾಲ್ಲೂಕಿನಲ್ಲಿ 273 ಹುದ್ದೆ ಖಾಲಿಯಿವೆ. ರಾಣೆಬೆನ್ನೂರು ತಾಲ್ಲೂಕಿನಲ್ಲಿ 104, ಹಾವೇರಿಯಲ್ಲಿ 204, ಬ್ಯಾಡಗಿಯಲ್ಲಿ 97, ಶಿಗ್ಗಾವಿಯಲ್ಲಿ 246, ಹಿರೇಕೆರೂರಿನಲ್ಲಿ 132 ಶಿಕ್ಷಕರ ಹುದ್ದೆಗಳು ಖಾಲಿ ಇವೆ.

ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ: ‘ಕಾಯಂ ಶಿಕ್ಷಕರ ನೇಮಕಾತಿ ಸದ್ಯಕ್ಕಿಲ್ಲ’ ಎಂದು ರಾಜ್ಯ ಸರ್ಕಾರವೇ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಮೌಖಿಕವಾಗಿ ತಿಳಿಸಿದೆ. ಹೀಗಾಗಿ, ಜಿಲ್ಲಾವಾರು ಅತಿಥಿ ಶಿಕ್ಷಕರ ನೇಮಕಕ್ಕೆ ಅಧಿಕಾರಿಗಳು ಪ್ರಕ್ರಿಯೆ ಆರಂಭಿಸಿದ್ದಾರೆ. ಹಾವೇರಿ ಜಿಲ್ಲೆಯಲ್ಲಿಯೂ ಅತಿಥಿ ಈ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ.

‘ಹಾವೇರಿ ಜಿಲ್ಲೆಯ ಶಾಲೆಗಳಿಗೆ ಸುಮಾರು 1200 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಯೋಚಿಸಲಾಗಿದೆ. ಶಿಕ್ಷಕರ ನೇಮಕಾತಿ ಮಾನದಂಡಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಅರ್ಹರನ್ನು ಆಯ್ಕೆ ಮಾಡುವ ಕೆಲಸ ನಡೆದಿದೆ. ಶಾಲಾ ಆರಂಭವಾದ ಕೆಲವೇ ದಿನಗಳಲ್ಲಿ ಅತಿಥಿ ಶಿಕ್ಷಕರು, ತರಗತಿಯಲ್ಲಿ ಬೋಧನೆ ಶುರು ಮಾಡಲಿದ್ದಾರೆ’ ಎಂದು ಅಧಿಕಾರಿಯೊಬ್ಬರು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-22-1814657968

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.