ಹಾವೇರಿ: ‘ಆದಿ ಶಂಕರಾಚಾರ್ಯರು ಸನಾತನ ಧರ್ಮ ರಕ್ಷಣೆಗಾಗಿ ಮಾಡಿದ ಮಹಾನ್ ಕಾರ್ಯ ಇಂದಿಗೂ ಜಾಗೃತವಾಗಿದೆ. ಸಹಸ್ರ ವರ್ಷಗಳ ನಂತರವೂಮ ಅವರು ಮಾಡಿದ ಕಾರ್ಯ ಶಾಶ್ವತವಾಗಿದೆ’ ಎಂದು ರಾಣೆಬೆನ್ನೂರು ದೇವಿಕಾ ಪಿಯು ಕಾಲೇಜಿನ ಉಪನ್ಯಾಸಕಿ ಸಂಗೀತಾ ದೇಸಾಯಿ ಹೇಳಿದರು.

ಇಲ್ಲಿನ ರಾಮಮಂದಿರದ ಸೀತಾ ರಾಮ ಮಂಗಲ ಕಾರ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಾವೇರಿ ಜಿಲ್ಲಾ ಬ್ರಾಹ್ಮಣ ಸಮಾಜದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ಶಂಕರಾಚಾರ್ಯ ಜಯಂತಿ’ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

‘ಭಾರತದ ಶ್ರೇಷ್ಠ ಆಧ್ಯಾತ್ಮಿಕ ನಾಯಕರು ಮತ್ತು ತತ್ವಜ್ಞಾನಿಗಳಲ್ಲಿ ಆದಿ ಶಂಕರಾಚಾರ್ಯರು ಒಬ್ಬರು. ಅದ್ವೈತ ವೇದಾಂತದ ಅಡಿಪಾಯವನ್ನು ಹಾಕಿ, ಸಾಂಸ್ಕೃತಿಕ ಮತ್ತು ಧಾರ್ಮಿಕ ಅವನತಿಯ ಸಮಯದಲ್ಲಿ ಹಿಂದೂ ಧರ್ಮವನ್ನು ಪುನರುಜ್ಜಿವನಗೊಳಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು’ ಎಂದು ಹೇಳಿದರು.

‘ಇಂದಿನ ಕೇರಳದ ಕಾಲಡಿಯಲ್ಲಿ ಜನಿಸಿದ್ದ ಆದಿ ಶಂಕರಾಚಾರ್ಯರು, ಭಾರತೀಯ ತತ್ವಶಾಸ್ತ್ರದ ಶ್ರೇಷ್ಠ ವ್ಯಕ್ತಿಯಲ್ಲಿ ಒಬ್ಬರು. ಶಂಕರಾಚಾರ್ಯರು ಮೂರು ಸಲ ಕಾಲ್ನಡಿಗೆಯಲ್ಲಿ ದೇಶವನ್ನು ಸುತ್ತಿದ್ದರು’ ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಆರ್.ವಿ. ಚಿನ್ನಿಕಟ್ಟಿ, ‘ಪ್ರಾಚೀನ ಭಾರತೀಯ ಉಪನಿಷತ್ತುಗಳ ತತ್ವಗಳು ಮತ್ತು ಹಿಂದೂ ಸಂಸ್ಕೃತಿಯನ್ನು ಪುನರುಜ್ಜಿವನಗೊಳಿಸಲು ಆದಿ ಶಂಕರಾಚಾರ್ಯರ ಕೊಡುಗೆ ಅಪಾರ’ ಎಂದು ಹೇಳಿದರು.

‘ಅದ್ವೈತ ಸಿದ್ಧಾಂತದ ಮೂಲಕ ಧರ್ಮದ ಹೆಸರಿನಲ್ಲಿ ಹರಡುತ್ತಿದ್ದ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವ ಕೆಲಸ ಮಾಡಿದ ಶಂಕರಾಚಾರ್ಯರು, ಆದ್ಯ ಗುರುವಾಗಿ ಪೂಜಿತರಾದರು’ ಎಂದರು.

ಹಾವೇರಿ ಜಿಲ್ಲಾ ಬ್ರಾಹ್ಮಣ ಸಮಾಜದ ಜಿಲ್ಲಾ ಅಧ್ಯಕ್ಷ ವಸಂತ ಮೊಕ್ತಾಲಿ, ಬ್ರಾಹ್ಮಣ ಮಹಾಸಭಾದ ಹಾವೇರಿ ಜಿಲ್ಲಾ ಪ್ರತಿನಿಧಿ ದತ್ತಾತ್ರೇಯ ನಾಡಿಗೇರ, ರಮೇಶ ನಾಯಕ ಬಾದಾಮಿ, ಹನುಮಂತ ನಾಯಕ ಬಾದಾಮಿ, ರಮೇಶ ಕಡಕೋಳ, ಉದಯ ಕುಲಕರ್ಣಿ, ರಮೇಶ ಕುಲಕರ್ಣಿ, ಉಮೇಶ ಕುಲಕರ್ಣಿ, ದತ್ತಾತ್ರೇಯ ಕಳ್ಳಿಹಾಳ, ಶ್ರೀನಿವಾಸ ಭಾವಿಕಟ್ಟಿ, ಪಿ.ಆರ್. ಭಾಗ್ಯಲಕ್ಷ್ಮಿ ಇದ್ದರು.

ಕಾರ್ಯಕ್ರಮಕ್ಕೂ ಮೊದಲು ನಗರದ ಶಂಕರ ಭಾರತಿ ಮಠದಿಂದ ರಾಮಮಂದಿರದವರೆಗೂ ಶಂಕರಾಚಾರ್ಯರ ಭಾವಚಿತ್ರದ ಮೆರವಣಿಗೆ ಜರುಗಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.