ಶಿಗ್ಗಾವಿ: ಸರ್ಕಾರಿ ಪ್ರೌಢಶಾಲೆ ನಿರ್ಮಾಣದ ಜಾಗಕ್ಕೆ ನಿರಾಕ್ಷೇಪಣ ಪತ್ರ ನೀಡಲು ಬನ್ನೂರ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಒತ್ತಾಯಿಸಿ ತಾಲ್ಲೂಕಿನ ಮುಗಳಿ ಗ್ರಾಮಸ್ಥರು ಶಿರಸ್ತೇದಾರ್ ವಿಶ್ವನಾಥ ತಿತ್ತಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ಗ್ರಾಮದಲ್ಲಿ 2022-23ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆ ಮಂಜೂರಾಗಿದೆ. ಈ ಪ್ರೌಢಶಾಲೆ ತರಗತಿಗಳು ಪ್ರಾಥಮಿಕ ಶಾಲೆಯ ಕೊಠಡಿಗಳಲ್ಲಿ ಜರುಗುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರೌಢಶಾಲೆಗೆ ಪ್ರತ್ಯೇಕ ಕೊಠಡಿಗಳ ನಿರ್ಮಾಣದ ಅಗತ್ಯವಿದೆ. ಅದಕ್ಕಾಗಿ ಗ್ರಾಮದ ಸರ್ವೇ ನಂಬರ್ 95ರಲ್ಲಿ ಸಾಮಾಜಿಕ ಅರಣ್ಯ ಇಲಾಖೆಗೆ ಒಳಪಡುವ ಖಾಲಿ ಜಾಗವಿದೆ. ಈ ಜಾಗೆಯ ಎರಡೂವರೆ ಎಕರೆ ವಿಸ್ತೀರ್ಣದಷ್ಟು ಖುಲ್ಲಾ ಜಾಗೆಯನ್ನು ಪ್ರೌಢಶಾಲೆಗೆ ಒದಗಿಸಲು ಅರಣ್ಯ ಇಲಾಖೆಯ ಅಧಿಕಾರಿಗಳು ಮೌಖಿಕವಾಗಿ ಒಪ್ಪಿರುವರು. ತಾವು ಬನ್ನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಈ ಅರಣ್ಯ ಜಾಗೆಗೆ ಗ್ರಾಮ ಪಂಚಾಯತಿಯ ಆಡಳಿತಾಧಿಕಾರಿಗಳಿಗೆ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರಾಕ್ಷೇಪಣ ಪತ್ರ ನೀಡುವಂತೆ ಸೂಚಿಸಬೇಕು ಆಗ್ರಹಿಸಿದರು.

ಗ್ರಾಮದ ಮುಖಂಡರಾದ ಬಸಪ್ಪ ಭದ್ರಶೆಟ್ಟಿ, ಯಲ್ಲಪ್ಪ ಅರಳಿಕಟ್ಟಿ, ಮಹಾದೇವಪ್ಪ ಕಾಮನಹಳ್ಳಿ, ಬಸನಗೌಡ ಪಾಟೀಲ, ನಿಂಗಪ್ಪ ಸಕ್ರಿ ಸೇರಿದಂತೆ ಗ್ರಾಮದ ಹಲವು ಮುಖಂಡರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-22-479262384

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.