ಶಿಗ್ಗಾವಿ: ತಾಲ್ಲೂಕಿನ ಹೋತ್ನಹಳ್ಳಿ ಸಿಂದಗಿಮಠದ ಆವರಣದಲ್ಲಿ ಮಂಗಳವಾರ ನಡೆದ ಲಿಂಗೈಕ್ಯ ಶಾಂತವೀರ ಸ್ವಾಮೀಜಿ ನೂತನ ಶಿಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ, ಮಠದ ನೂತನ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮ ಏಪ್ರಿಲ್ 18ರಿಂದ ಏಪ್ರಿಲ್ 23ರ ವರೆಗೆ ನಡೆಯಲಿದೆ ಎಂದು ಹಾವೇರಿ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಹೋತ್ನಹಳ್ಳಿ ಸಿಂದಗಿಮಠದ ಆವರಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

6ದಿನಗಳ ವರೆಗೆ ನಡೆಯುವ ಈ ಕಾರ್ಯಕ್ರಮ ಯಶಸ್ವಿಗೆ ಪ್ರತಿಯೊಬ್ಬರ ಶ್ರಮ ಮುಖ್ಯವಾಗಿದೆ. ಸ್ವಾಗತ ಸಮಿತಿ, ಹಣಕಾಸಿನ ಸಮಿತಿ, ಪ್ರಚಾರ ಸಮಿತಿ, ವೇದಿಕೆ ಸಮಿತಿ, ದಾಸೋಹ ಸಮಿತಿ ಹೇಗೆ ಹಲವು ಸಮಿತಿಗಳನ್ನು ಮಾಡುವ ಮೂಲಕ ಕೆಲಸ ಕಾರ್ಯಗಳನ್ನು ಹಂಚಿಕೆ ಮಾಡಿಕೊಳ್ಳಬೇಕು. ಜವಾಬ್ದಾರಿ ವಹಿಸಿಕೊಂಡ ಕಾರ್ಯಗಳನ್ನು ತಪ್ಪದೇ ನಿರ್ವಹಿಸಬೇಕು. ದೂರದಿಂದ ಬರುವ ಭಕ್ತಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಪ್ರತಿ ದಿನದ ಕಾರ್ಯಕ್ರಮಗಳ ಯಶಸ್ವಿಗೆ ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಹೊತ್ನಹಳ್ಳಿ ಸಿಂದಗಿಮಠದ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಿದ್ದರು. ಮುಖಂಡರಾದ ಸಿದ್ದನಗೌಡ ಪಾಟೀಲ, ಧರ್ಮಣ್ಣ ಭಂಗಿ, ಅಶೋಕ ಗುಳೇದ, ನಾಗಪ್ಪ ಕೋರಶೆಟ್ಟರ, ಪ್ರವೀಣ ಗೊಳಣ್ಣವರ, ಚಂದ್ರಪ್ಪ ಬೆಳವತ್ತಿ, ವೀರಭದ್ರಪ್ಪ ಬೈಲವಾಳ, ರುದ್ರಪ್ಪ ಭಂಗಿ, ದ್ಯಾಮಣ್ಣ ಸವಣೂರ, ಬಸಪ್ಪ ಸವಣೂರ, ಮಲ್ಲಪ್ಪ ಮೂಡೂರ, ಮಲ್ಲಪ್ಪ ಗುಳೇದ, ಬಸಲಿಂಗಪ್ಪ ಕುಂದೂರ, ಶಿವಾನಂದ ಈಳಿಗೇರ, ಫಕ್ಕೀರಯ್ಯ ಹಿರೇಮಠ ಸೇರಿದಂತೆ ಸುತ್ತಲಿನ ಗ್ರಾಮಗಳ ಮುಖಂಡರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-22-1392686793

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.