ಹಾವೇರಿ: ರಾಜ್ಯದಾದ್ಯಂತ ಮೇ 18ರಿಂದ 25ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ–2 ನಡೆಯಲಿದ್ದು, ಜಿಲ್ಲೆಯಲ್ಲಿಯೂ ಪರೀಕ್ಷೆಗೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ಜಿಲ್ಲೆಯ 2,160 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಏಳು ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ನಗರದ ಹೊರವಲಯದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ‘ಎಸ್.ಎಸ್.ಎಲ್.ಸಿ. ಪರೀಕ್ಷೆ–2ರ ಪೂರ್ವ ಸಿದ್ಧತಾ ಸಭೆ’ಯಲ್ಲಿ ಪಾಲ್ಗೊಂಡಿದ್ದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮೋಹನ ದಂಡಿನ ಅವರು ಪರೀಕ್ಷೆ ಬಗ್ಗೆ ಮಾಹಿತಿ ನೀಡಿದರು.

‘667 ಹೊಸ ವಿದ್ಯಾರ್ಥಿಗಳು, 1101 ಪುನರಾವರ್ತಿತ ವಿದ್ಯಾರ್ಥಿಗಳು, 341 ಖಾಸಗಿ ಹೊಸ ಅಭ್ಯರ್ಥಿಗಳು ಹಾಗೂ 51 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಸೇರಿ ಒಟ್ಟು 2160 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 1681 ಗಂಡು ಮತ್ತು 479 ಹೆಣ್ಣು ಮಕ್ಕಳಿದ್ದಾರೆ’ ಎಂದರು.

‘ಜಿಲ್ಲೆಯ ಏಳು ಶೈಕ್ಷಣಿಕ ತಾಲ್ಲೂಕುಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಪರೀಕ್ಷೆಯನ್ನು ಸುಗಮವಾಗಿ ನಡೆಸಲು, 7 ಮುಖ್ಯ ಅಧೀಕ್ಷಕರು, 7 ಕಸ್ಟೋಡಿಯನ್, 7 ಸ್ಥಾನಿಕ ಜಾಗೃತದಳ, 7 ಮಾರ್ಗಾಧಿಕಾರಿಗಳು, 93 ಕೊಠಡಿ ಮೇಲ್ವಿಚಾರಕರು ಹಾಗೂ 7 ಕಚೇರಿ ಸಹಾಯಕರನ್ನು ನೇಮಕ ಮಾಡಲಾಗಿದೆ. ಪ್ರಶ್ನೆಪ್ರತಿಕೆ ಸರಬರಾಜಿಗಾಗಿ ಮಾರ್ಗಗಳನ್ನು ರಚಿಸಲಾಗಿದೆ’ ಎಂದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ್, ‘ಮೇ 18ರಿಂದ ಮೇ 25ರವರೆಗೆ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ನಡೆಯಲಿದೆ. ನಕಲು ಮುಕ್ತ ಹಾಗೂ ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು. ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ವಿವಿಧ ಇಲಾಖೆಯ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು, ಕೊಠಡಿ ಮೇಲ್ವಿಚಾರಕರು ತಮ್ಮ ಕರ್ತವ್ಯದಲ್ಲಿ ಯಾವುದೇ ಲೋಪವಾಗದಂತೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು’ ಎಂದು ಸೂಚಿಸಿದರು.

‘ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಹಾಗೂ ಶಿಕ್ಷಕರು, ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಯಮ ಉಲ್ಲಂಘನೆಯಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಸಬೇಕು’ ಎಂದರು.

‘ಪ್ರಶ್ನೆಪತ್ರಿಕೆ ಬಂಡಲ್ ತೆಗೆದುಕೊಂಡು ಹೋಗಲು ಪ್ರತಿ ತಾಲ್ಲೂಕಿಗೆ ತ್ರಿ ಸದಸ್ಯ ಸಮಿತಿ ರಚಿಸಲಾಗಿದೆ. ಪೊಲೀಸ್ ಬಂದೋಬಸ್ತ್ನಲ್ಲಿ ಪ್ರಶ್ನೆಪತ್ರಿಕೆಗಳನ್ನು ತೆಗೆದುಕೊಂಡು ಹೋಗಬೇಕು. ಪರೀಕ್ಷಾ ಕೊಠಡಿಗಳಲ್ಲಿ ಮೂಲ ಸೌಕರ್ಯ ಕಲ್ಪಿಸಬೇಕು. ಕೇಂದ್ರಗಳಿಗೆ ಪೊಲೀಸ್ ಬಂದೋಬಸ್ತ್ ಒದಗಿಸಬೇಕು. ಆರೋಗ್ಯ ಶುಶ್ರೂಷಕಿಯರನ್ನು ನಿಯೋಜಿಸಬೇಕು’ ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಅಶೋಕ ಶಾಸ್ತ್ರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಂ.ಎಚ್. ಪಾಟೀಲ, ಎ.ಎಸ್. ಅಡಿಗ, ಆರ್.ವಿ. ಚಿನ್ನಿಕಟ್ಟಿ, ಎಸ್.ಜಿ.ಕೋಟಿ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-22-1677318419

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.