ಹಾವೇರಿ: ‘ಸಮಾಜದಲ್ಲಿ ಯಾವುದೂ ಏಕಾಏಕಿ ಸುಲಭವಾಗಿ ಸಿಗುವುದಿಲ್ಲ. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಯಾವುದೇ ಸಮಸ್ಯೆ ಹಾಗೂ ಸವಾಲು ಬಂದರೂ ಅವುಗಳನ್ನು ಧೈರ್ಯವಾಗಿ ಎದುರಿಸಬೇಕು. ನಿರ್ದಿಷ್ಟ ಗುರಿ ಇಟ್ಟುಕೊಂಡು, ಅದನ್ನು ತಲುಪುವ ಶಪಥ ಮಾಡಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ್ ಹೇಳಿದರು.

ನಗರದ ಜಿಲ್ಲಾ ಸರ್ಕಾರಿ ನೌಕರರ ಸಂಘದ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ‘ಪಿಯು ದ್ವಿತೀಯ ವರ್ಷದ ಸಾಧಕ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ’ ಉದ್ಘಾಟಿಸಿ ಅವರು ಮಾತನಾಡಿದರು.

‘ವಿದ್ಯಾರ್ಥಿ ಜೀವನವು, ಭವಿಷ್ಯವನ್ನು ಕಟ್ಟಿಕೊಳ್ಳಲು ಅತ್ಯಂತ ಶ್ರೇಷ್ಠ ಸಮಯವಾಗಿದೆ. ಈ ಸಮಯದಲ್ಲಿ ಉನ್ನತ ಗುರಿಯೊಂದಿಗೆ ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿದರೆ, ಸುಲಭವಾಗಿ ಗುರಿ ತಲುಪಬಹುದು’ ಎಂದರು.

‘ನಮ್ಮ ಕನಸುಗಳನ್ನು ಬೆನ್ನತ್ತಿ ಹೋಗುವಾಗ, ಕುಟುಂಬದ ಆರ್ಥಿಕ ಪರಿಸ್ಥಿತಿಯು ಗಂಭೀರವಾದ ಪರಿಣಾಮ ಬೀರುತ್ತದೆ. ಆದರೆ, ಶಿಸ್ತುಬದ್ಧ ಅಧ್ಯಯನದಿಂದ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದರೆ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಬಹುದು. ಜೀವನದಲ್ಲಿ ಸಾಧನೆ ಮಾಡಿದ ಸಾಧಕರನ್ನು ಪ್ರೇರಣೆಯಾಗಿ ಇಟ್ಟುಕೊಂಡು, ಅಧ್ಯಯನದಲ್ಲಿ ಮುನ್ನಡೆಯಬೇಕು’ ಎಂದರು.

ಉಪನ್ಯಾಸ ನೀಡಿದ ಡಾ. ಉಮಾ ಬಳಿಗಾರ, ‘ಪಿಯುಸಿ ನಂತರ ವಿವಿಧ ಕೋರ್ಸ್ಗಳನ್ನು ಮಾಡಬಹುದು. ವಿದ್ಯಾರ್ಥಿಗಳು ತಮ್ಮ ಆಸಕ್ತಿಗೆ ತಕ್ಕಂತೆ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಂಡು, ಆಯಾ ಕ್ಷೇತ್ರಗಳಲ್ಲಿ ಹೆಸರು ಮಾಡಬೇಕು’ ಎಂದರು.

ಪಿಯು ದ್ವಿತೀಯ ವರ್ಷದ ಪರೀಕ್ಷೆಯ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಪ್ರಭಾಕರರಾವ್ ಮಂಗಳೂರು ಅಧ್ಯಕ್ಷತೆ ವಹಿಸಿದ್ದರು. ಶೇಖರ ಭಜಂತ್ರಿ, ಸತೀಶ ಕುಲಕರ್ಣಿ, ಮಲ್ಲೇಶ ಕರಿಗಾರ, ಮಂಜುನಾಥ ಹಟ್ಟಿ, ಫಕೀರಮ್ಮ ಬಾರ್ಕಿ, ರವಿಕುಮಾರ, ಸಾವಿತ್ರಿ ಬಾರ್ಕಿ, ಅನಿತಾ ಹರನಗಿರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-22-900935746

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.