ಬ್ಯಾಡಗಿ: ರಕ್ತದೊತ್ತಡ, ಮಧುಮೇಹದಂತಹ ರೋಗಗಳ ನಿಯಂತ್ರಣ ಹಾಗೂ ಆತ್ಮತೃಪ್ತಿಗಾಗಿ ಪ್ರತಿಯೊಬ್ಬರೂ ರಕ್ತದಾನ ಮಾಡುವುದು ಪ್ರಸ್ತುತ ಅಗತ್ಯವಿದೆ ಎಂದು ಭಾರತೀಯ ಸ್ಟೇಟ್ ಬ್ಯಾಂಕ್ ಶಾಖಾ ವ್ಯವಸ್ಥಾಪಕ ರಾಜ್ ತಿಲಕ ಹೇಳಿದರು.

ಪಟ್ಟಣದ ಶಾಖೆಯಲ್ಲಿ ಜಿಲ್ಲಾ ರಕ್ತ ನಿಧಿ ಕೇಂದ್ರದ ಸಹಯೋಗದಲ್ಲಿ ಸೋಮವಾರ ಏರ್ಪಡಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ರಕ್ತದಾನ ಮಾಡಲು ಯುವಕರು ಸ್ವಯಂ ಪ್ರೇರಣೆಯಿಂದ ಮುಂದೆ ಬರಬೇಕು. ಅಪಘಾತದಲ್ಲಿ ಗಾಯಗೊಂಡು ರಕ್ತ ಹೀನತೆಯಿಂದಾಗುವ ಸಾವು ತಡೆಯಲು ಹಾಗೂ ಇನ್ನಿತರ ಕಾಯಿಲೆಯಿಂದ ಬಳಲುವ ಮಕ್ಕಳಿಗೆ ರಕ್ತದ ಅವಶ್ಯಕತೆ ಇರುತ್ತದೆ. ಈ ಹಿನ್ನೆಲೆಯಲ್ಲಿಆರೋಗ್ವಂತ ಮನುಷ್ಯ ರಕ್ತದಾನ ಮಾಡುವುದು ಸೂಕ್ತ ಎಂದು ಹೇಳಿದರು.

ಜಿಲ್ಲಾ ರಕ್ತನಿಧಿ ಕೇಂದ್ರದ ಡಾ.ಬಸವರಾಜ ಕಮತದ ಮಾತನಾಡಿ, ದೇಶದಲ್ಲಿ ಪ್ರತಿ ವರ್ಷ 41 ದಶ ಲಕ್ಷ ಯೂನಿಟ್ ರಕ್ತದ ಕೊರತೆಯಾಗುತ್ತಿದೆ. ಸಮಯಕ್ಕೆ ಸರಿಯಾಗಿ ರಕ್ತ ಸಿಗದೇ ಅಪಘಾತದಲ್ಲಿ ಗಾಯಗೊಂಡವರು ಹಾಗೂ ವಿವಿಧ ಕಾಯಿಲೆಗಳಿಂದ ಬಳಲುವವರು ಮೃತಪಡುತ್ತಿದ್ದಾರೆ. ಅಮೂಲ್ಯವಾದ ಜೀವಗಳನ್ನು ಉಳಿಸಲು ಆರೋಗ್ಯವಂತ ಯುವಕರು ರಕ್ತದಾನ ಮಾಡುವುದು ಅತೀ ಅಗತ್ಯವಾಗಿದೆ ಎಂದರು.

ಯುವ ಪೀಳಿಗೆ ದುಶ್ಚಟಗಳಿಂದ ದೂರವಿದ್ದು, ಆರೋಗ್ಯಯುತ ಆಹಾರ ಸೇವಿಸಿದರೆ ಮಾತ್ರ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಿದೆ ಎಂದರು.

ಡಾ.ಶಶಿಕುಮಾರ, ಬ್ಯಾಂಕ್ ಸಿಬ್ಬಂದಿ ವಿಜಯಲಕ್ಷ್ಮಿ ದಾನರೆಡ್ಡಿ, ಅಭಯ, ಗಣೇಶ ಮೂಡಿ, ರಾಮು ಕಮ್ಮಾರ, ಅನುಷಕುಮಾರ, ಸಾಯಿ ಜೀತೇಂದ್ರ, ವಿನಯ ಎಂ ಕೆ, ಪ್ರಶಾಂತ ಡಿ, ಮಾಜಿ ಸೈನಿಕ ಎಂ ಡಿ ಚಿಕ್ಕಣ್ಣನವರ, ಮೋಹನಕುಮಾರ ಹುಲ್ಲತ್ತಿ ಉಪಸ್ಥಿತರಿದ್ದರು.

ರಕ್ತವನ್ನು ಉತ್ಪಾದಿಸಲು ಸಾಧ್ಯವಿಲ್ಲ. ಮನುಷ್ಯ ದಾನ ಮಾಡಿದರಷ್ಟೆ ರಕ್ತದ ಉತ್ಪಾದನೆ ಸಾಧ್ಯವಿದೆ. ರಕ್ತದಾನದಿಂದ ಮೂವರ ಪ್ರಾಣ ಉಳಿಸಬಹುದು.
ರಾಜ್ ತಿಲಕ ಭಾರತೀಯ ಸ್ಟೇಟ್ ಬ್ಯಾಂಕ್ ಶಾಖಾ ವ್ಯವಸ್ಥಾಪಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.