ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆತ್ಮಹತ್ಯೆ ಪ್ರಕರಣ: ಎಸ್‌.ಆರ್‌.ಪಾಟೀಲರ ಕೈವಾಡ- ಶಾಸಕ ನೆಹರು ಓಲೇಕಾರ ಗಂಭೀರ ಆರೋಪ

Last Updated 14 ಜೂನ್ 2022, 15:33 IST
ಅಕ್ಷರ ಗಾತ್ರ

ಬ್ಯಾಡಗಿ: ತಾಲ್ಲೂಕಿನ ಶಿಡೇನೂರು ಗ್ರಾಮದಲ್ಲಿ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆಯ ಹಿಂದೆ ಬ್ಯಾಡಗಿಯ ಕಾಂಗ್ರೆಸ್‌ ಮುಖಂಡ ಎಸ್‌.ಆರ್‌.ಪಾಟೀಲ ಅವರ ಕೈವಾಡವಿದೆ. ನಿನ್ನೆ ರೈತರನ್ನು ಕರೆಸಿಕೊಂಡು ಪ್ರಚೋದನೆ ನೀಡಿದ್ದಾರೆ ಎಂದು ಶಾಸಕ ನೆಹರು ಓಲೇಕಾರ ಗಂಭೀರ ಆರೋಪ ಮಾಡಿದ್ದಾರೆ.

ಮಂಗಳವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ‘ನಮ್ಮ ಕುಟುಂಬದವರು ಆಸ್ತಿ ಕೊಡಿ ಅಂತಾ ಯಾರನ್ನೂ ಕೇಳಿಲ್ಲ. ನನ್ನ ಜೊತೆಗೆ ಯಾರೂ ಚರ್ಚೆ ಮಾಡಿಲ್ಲ. ನಾನೇ ಶಿಡೇನೂರು ಗ್ರಾಮದ ಕೆಲವು ಕುಟುಂಬಗಳಿಗೆ ಹಿಂದೆ ಜಾಗ ನೀಡಿದ್ದೇನೆ. ನಾನು ಜಮೀನಿನ ಪಟ್ಟಾ ಕೊಟ್ಟಾಗ 18ರಿಂದ 19 ಕುಟುಂಬಗಳಿತ್ತು. ಈಗ ಅವರ ಸಂಖ್ಯೆ ಜಾಸ್ತಿಯಾಗಿದೆ’ ಎಂದು ಹೇಳಿದರು.

‘ಹಿಂದೆ ಕೊಟ್ಟಿದ್ದ ಜಾಗದ ಜತೆಗೆ ಹೆಚ್ಚುವರಿ ಜಾಗವನ್ನು ಒತ್ತುವರಿ ಮಾಡಿದ್ದಾರೆ. ಒತ್ತುವರಿ ಮಾಡಿದ ಭೂಮಿ ತೆರವುಗೊಳಿಸುವಂತೆ ಗ್ರಾಮಸ್ಥರು ಅವರಿಗೆ ಸೂಚಿಸಿದ್ದಾರೆ. ಸ್ಮಶಾನದ ಭೂಮಿಯ ಹಿಂದೆ ಇರುವ ಜಾಗವನ್ನು ಆ ಕುಟುಂಬಗಳಿಗೆ ನೀಡಲಾಗಿತ್ತು’ ಎಂದು ತಿಳಿಸಿದ್ದಾರೆ.

ನನ್ನ ಪಾತ್ರವಿಲ್ಲ:
‘ಶಾಸಕ ನೆಹರು ಓಲೇಕಾರ ಕುಟುಂಬದ ಸರ್ವಾಧಿಕಾರತ್ವ ಧೋರಣೆಯಿಂದ ನೊಂದ ಬಡವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕಳೆದ ವಾರ ನನ್ನನ್ನು ನೊಂದವರು ಭೇಟಿ ಮಾಡಿದ್ದರು. ತಹಶೀಲ್ದಾರ್ ಬಳಿ ನ್ಯಾಯ ಕೇಳುವಂತೆ ಸಲಹೆ ನೀಡಿದ್ದೆ. ಆತ್ಮಹತ್ಯೆ ಘಟನೆಗೂ ನನಗೂ ಸಂಬಂಧವಿಲ್ಲ. ಇದರಲ್ಲಿ ನನ್ನ ಪಾತ್ರವಿಲ್ಲ’ ಎಂದು ಕಾಂಗ್ರೆಸ್‌ ಮುಖಂಡ ಎಸ್‌.ಆರ್‌.ಪಾಟೀಲ ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT