ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಾವೇರಿ | 21 ಶಿಕ್ಷಕರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Published : 4 ಸೆಪ್ಟೆಂಬರ್ 2024, 15:35 IST
Last Updated : 4 ಸೆಪ್ಟೆಂಬರ್ 2024, 15:35 IST
ಫಾಲೋ ಮಾಡಿ
Comments

ಹಾವೇರಿ: ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ತೋರಿದ ಜಿಲ್ಲೆಯ 21 ಶಿಕ್ಷಕರನ್ನು 2024–25ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

‘ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ತಲಾ ಏಳು ಶಿಕ್ಷಕರಿಗೆ ಪ್ರಶಸ್ತಿ ನೀಡಲಾಗುತ್ತಿದೆ’ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗ್ಗಿ ತಿಳಿಸಿದ್ದಾರೆ.

ಕಿರಿಯ ಪ್ರಾಥಮಿಕ ಶಾಲೆ ವಿಭಾಗ: ಬ್ಯಾಡಗಿ ತಾಲ್ಲೂಕಿನ ಗುಮ್ಮನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಯಲ್ಲಪ್ಪ ಭರಮಪ್ಪ ಹೊಸಳ್ಳಿ, ಶಿಗ್ಗಾವಿ ತಾಲ್ಲೂಕಿನ ಮುಗಳಿಕಟ್ಟಿ ಸರ್ಕಾರಿ ಕಿರಿಯ ಉರ್ದು ಪ್ರಾಥಮಿಕ ಶಾಲೆ ಸಹ ಶಿಕ್ಷಕ ಬಸವರಾಜ ಬಸವನಾಳ, ಹಿರೇಕೆರೂರು ತಾಲ್ಲೂಕಿನ ಪರ್ವತಸಿದ್ದಗೇರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಕುಮಾರಸ್ವಾಮಿ ಕಬ್ಬಿಣಕಂತಿಮಠ, ಹಾನಗಲ್ ತಾಲ್ಲೂಕಿನ ತುಮರಿಕೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ರಾಘವೇಂದ್ರ ಕಲಾಲ, ಹಾವೇರಿ ತಾಲ್ಲೂಕಿನ ನೆಲೊಗಲ್ಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕಿ ಸವಿತಾ ಎಚ್.ಜೆ., ಸವಣೂರ ತಾಲ್ಲೂಕಿನ ಚಳ್ಯಾಳ ಸರ್ಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆ ಸಹ ಶಿಕ್ಷಕಿ ಕವಿತಾ ಎನ್. ಅಣ್ಣಿಗೇರಿ ಹಾಗೂ ರಾಣೇಬೆನ್ನೂರು ತಾಲ್ಲೂಕಿನ ಮಾಕನೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ವಿಜಯ ವಿಷ್ಣಪ್ಪ ಬಂಗಾರಿ.

ಹಿರಿಯ ಪ್ರಾಥಮಿಕ ಶಾಲೆ ವಿಭಾಗ: ಬ್ಯಾಡಗಿ ತಾಲ್ಲೂಕಿನ ಘಾಳಪೂಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಅಶೋಕ ಎಚ್.ಮೂಡಿ, ಹಾವೇರಿ ಸರ್ಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆ-1 ಸಹ ಶಿಕ್ಷಕ ಎಸ್.ಎ.ಹೊನ್ನಾಳಿ, ಹಾನಗಲ್ ತಾಲ್ಲೂಕಿನ ಬಾಳಂಬೀಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಎಫ್.ಪಿ.ಚಿಕ್ಕಜ್ಜನವರ, ಸವಣೂರ ತಾಲ್ಲೂಕಿನ ಫಕೀರನಂದಿಹಳ್ಳಿ ಸರ್ಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆ ಸಹ ಶಿಕ್ಷಕ ಮುತ್ತಪ್ಪ ಸಂಗಪ್ಪ ಅಕ್ಕಿ, ಶಿಗ್ಗಾವಿ ತಾಲ್ಲೂಕಿನ ಇಬ್ರಾಹಿಂಪೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಮಲ್ಲಿಕಾರ್ಜುನಗೌಡ ವಿ. ಪಾಟೀಲ, ರಾಣೇಬೆನ್ನೂರ ತಾಲ್ಲೂಕಿನ ದೇವರಗುಡ್ಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕಿ ಸಾವಿತ್ರಿ ಎಚ್.ಬಿ ಹಾಗೂ ಹಿರೇಕೆರೂರು ತಾಲ್ಲೂಕಿನ ಚಿಕ್ಕೊಣತಿ ಸರ್ಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆ ಸಹ ಶಿಕ್ಷಕ ಪ್ರಕಾಶ ಜೋಗೊಂಡರ.

ಪ್ರೌಢ ಶಾಲೆ ವಿಭಾಗ: ಬ್ಯಾಡಗಿ ತಾಲ್ಲೂಕಿನ ಹೆಡಿಗ್ಗೊಂಡ ತೋಟದ ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕ ದತ್ತಾತ್ತೇಯ ಜೋಶಿ, ಹಾವೇರಿ ತಾಲ್ಲೂಕಿನ ಯಲಗಚ್ಚ ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕ ಅಯ್ಯಪ್ಪ ಗುಡ್ಡಳ್ಳಿ, ಹಾನಗಲ್ ತಾಲ್ಲೂಕಿನ ಕುಸನೂರ ಮಾರಿಕಾಂಬಾ ಬಾಲಕಿಯರ ಪ್ರೌಢಶಾಲೆ ಸಹ ಶಿಕ್ಷಕ ತಾರಕೇಶ ರುದ್ರಯ್ಯ ಮಠದ, ಹಿರೇಕೆರೂರು ವ ಕಡೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಷಣ್ಮುಖ ಹುಳಬುತ್ತಿ, ರಾಣೇಬೆನ್ನೂರು ತಾಲ್ಲೂಕಿನ ಮಾಕನೂರ ಮಾರ್ಕಂಡೇಶ್ವರ ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕ ನಾಗರಾಜ ಮತ್ತೂರ, ಸವಣೂರ ತಾಲ್ಲೂಕಿನ ಕಳಸೂರ ಎಚ್.ಎಸ್.ಪಾಟೀಲ ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕ ಸಿ.ಟಿ.ಪೂಜಾರ ಹಾಗೂ ಶಿಗ್ಗಾವಿ ಸರ್ಕಾರಿ ಉರ್ದು ಪ್ರೌಢಶಾಲೆ ಸಹ ಶಿಕ್ಷಕ ರಾಘವೇಣದ್ರ ಅರಶನಗಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT