ಹಾವೇರಿ: ‘ಭಾರತದಲ್ಲಿ ಸುಮಾರು 27 ಕೋಟಿಗೂ ಹೆಚ್ಚು ಮಂದಿ ತಂಬಾಕು ಹಾಗೂ ಅದರ ಉತ್ಪನ್ನಗಳನ್ನು ತಿನ್ನುತ್ತಿದ್ದಾರೆ. ಪ್ರತಿವರ್ಷ 13 ಲಕ್ಷಕ್ಕೂ ಹೆಚ್ಚು ಜನರು, ತಂಬಾಕು ಸಂಬಂಧಿತ ಕಾಯಿಲೆಗಳಿಗೆ ತುತ್ತಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ’ ಎಂದು ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಎಂ.ಜಿ. ಶಿವಳ್ಳಿ ಅವರು ಆತಂಕ ವ್ಯಕ್ತಪಡಿಸಿದರು.

ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆಡಳಿತ, ಜಿಲ್ಲಾ ವಕೀಲರ ಸಂಘ, ಪೊಲೀಸ್ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ‘ವಿಶ್ವ ತಂಬಾಕು ರಹಿತ ದಿನಾಚರಣೆ’ ಪ್ರಯುಕ್ತ ಸೋಮವಾರ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ತಂಬಾಕಿನಿಂದ ಮೃತಪಟ್ಟ 13 ಲಕ್ಷ ಜನರ ಪೈಕಿ, ಶೇ. 48ರಷ್ಟು ಮಂದಿ ಗ್ರಾಮೀಣ ಪ್ರದೇಶದವರಾಗಿದ್ದಾರೆ. ಕರ್ನಾಟಕದಲ್ಲಿ ಶೇ. 22.8ರಷ್ಟು (15 ವರ್ಷ ವಯಸ್ಸು ಮೇಲ್ಪಟ್ಟ) ವ್ಯಕ್ತಿಗಳು ತಂಬಾಕು ಉತ್ಪನ್ನ ತಿನ್ನುತ್ತಿದ್ದಾರೆ. ಪ್ರಸ್ತುತ ಶೇ 8.8ರಷ್ಟು ಧೂಮಪಾನಿಗಳಿದ್ದಾರೆ’ ಎಂದರು.

‘ಭಾರತ ಹಳ್ಳಿಗಳ ದೇಶ. ಗ್ರಾಮೀಣ ಭಾಗದ ಜನರು ಮುಗ್ದರು, ತಂಬಾಕು ತಿನ್ನುವುದರಿಂದ ಉಂಟಾಗುವ ಹಾನಿಗಳ ತಿಳಿವಳಿಕೆ ಇಲ್ಲ. ಹಾಗಾಗಿ, ಸಾರ್ವಜನಿಕರಿಗೆ ತಂಬಾಕು ಉತ್ಪನ್ನಗಳನ್ನು ತಿನ್ನುವುದರಿಂದ ಉಂಟಾಗುವ ದುಷ್ಪರಿಣಾಮದ ಜಾಗೃತಿ ಮೂಡಿಸುವ ಅಗತ್ಯವಿದೆ’ ಎಂದು ಹೇಳಿದರು.

‘ತಂಬಾಕು ಉತ್ಪನ್ನಗಳನ್ನು ತಿನ್ನುವುದರಿಂದ, ಶ್ವಾಸಕೋಶ ಸಮಸ್ಯೆ ಹಾಗೂ ಕ್ಯಾನ್ಸರ್ನಂಥ ಗಂಭೀರ ಕಾಯಿಲೆಗೆ ಒಳಗಾಗುತ್ತಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿದ್ದರೂ ಅದಕ್ಕೆ ಕಡಿವಾಣ ಬೀಳುತ್ತಿಲ್ಲ. ಹಣದ ಸಂಪತ್ತಿಗಿಂತ ಆರೋಗ್ಯ ಭಾಗ್ಯ ದೊಡ್ಡದು’ ಎಂದು ತಿಳಿಸಿದರು.

‘ತಂಬಾಕು ತಿನ್ನುವುದರಿಂದ ಮಾನವನ ದೇಹದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಬೇಕು. ಕೋಟ್ಪಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ತಂಬಾಕು ತಿನ್ನುವುದನ್ನು ತ್ಯಜಿಸಲು, ಅಗತ್ಯ ಆರೋಗ್ಯ ಚಿಕಿತ್ಸೆ ಹಾಗೂ ಆಪ್ತ ಸಮಾಲೋಚನೆ ಪಡೆಯಬೇಕು’ ಎಂದು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆಗಿರುವ ನ್ಯಾಯಾಧೀಶರಾದ ಶ್ರೀಶೈಲಜಾ ಎಚ್.ವಿ., ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸಿದ್ದನಗೌಡ ಎಚ್.ಸಿ., ಕಾರ್ಯದರ್ಶಿ ಪಿ.ಎಸ್. ಹೆಬ್ಬಾಳ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಪಿ.ಆರ್. ಹಾವನೂರ, ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ದೇವರಾಜ ಸಾರಥಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಭಾರತಿ ಎಚ್., ಡಾ. ನಿಲೇಶ, ಡಾ. ಪರಸಪ್ಪ ಚುರ್ಚಿಹಾಳ, ಡಾ. ಪ್ರಭಾಕರ ಕುಂದೂರ, ಜಿಲ್ಲಾ ಶೂಶ್ರೂಷಕ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಸರಸ್ವತಿ ವೈ.ಎಚ್., ಡಾ. ಸಂತೋಷ ದಡ್ಡಿ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-22-1590648195

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.