ಹಾವೇರಿ: ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಹಳೇ ಬಂಕಾಪುರದಲ್ಲಿ ಟ್ರ್ಯಾಕ್ಟರ್ ಚಕ್ರ ತಲೆ ಮೇಲೆ ಹರಿದು ರಾಫೀಯಾ ಎಂಬ ಬಾಲಕಿ ಮೃತಪಟ್ಟಿದ್ದು, ಈ ಸಂಬಂಧ ಬಂಕಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಬಾಲಕಿಯ ಸಾವಿನ ಬಗ್ಗೆ ತಂದೆ ದೂರು ನೀಡಿದ್ದಾರೆ. ಆರೋಪಿತ ಟ್ರ್ಯಾಕ್ಟರ್ ಚಾಲಕ ಮಂಜು ಬಸಪ್ಪ ಸಿರಿಯಕ್ಕನವರ (27) ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಹಳೇ ಬಂಕಾಪುರದ ಮೂಕಬಸರಿಕಟ್ಟಿ ರಸ್ತೆಯಲ್ಲಿ ಬಾಲಕಿ ಆಟವಾಡುತ್ತಿದ್ದಳು. ಇದೇ ಮಾರ್ಗವಾಗಿ ಆರೋಪಿ ಮಂಜು, ಟ್ರ್ಯಾಕ್ಟರ್ ತೆಗೆದುಕೊಂಡು ಹೊರಟಿದ್ದರು. ನಿರ್ಲಕ್ಷ್ಯ ಹಾಗೂ ಅತೀ ವೇಗದಲ್ಲಿ ಟ್ರ್ಯಾಕ್ಟರ್ ಚಲಾಯಿಸಿದ್ದ. ಬಾಲಕಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿತ್ತು. ರಸ್ತೆಗೆ ಬಿದ್ದ ಬಾಲಕಿಯ ತಲೆ ಮೇಲೆಯೇ ಟ್ರ್ಯಾಕ್ಟರ್ನ ಚಕ್ರ ಹರಿದಿತ್ತು. ತೀವ್ರ ಗಾಯಗೊಂಡು ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-22-1236778630

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.