ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ಮೀನು ಹಿಡಿಯಲು ಹೋದ ಇಬ್ಬರು ನೀರುಪಾಲು

Last Updated 29 ಆಗಸ್ಟ್ 2021, 13:41 IST
ಅಕ್ಷರ ಗಾತ್ರ

ಹಾವೇರಿ: ರಾಣೆಬೆನ್ನೂರು ತಾಲ್ಲೂಕಿನ ಚೌಡಯ್ಯದಾನಪುರ ಗ್ರಾಮದ ಸಮೀಪ ತುಂಗಭದ್ರಾ ನದಿಯಲ್ಲಿ ಭಾನುವಾರ ಮೀನು ಹಿಡಿಯಲು ಹೋದ ಇಬ್ಬರು ನೀರುಪಾಲಾಗಿದ್ದಾರೆ.

ಹಾವೇರಿ ತಾಲ್ಲೂಕಿನ ಗುತ್ತಲ ಪಟ್ಟಣದ ಫಕ್ಕಿರೇಶ ಹೊನ್ನಪ್ಪ ಮಣ್ಣೂರ (23) ಮತ್ತು ಯಲ್ಲಪ್ಪ ಫಕ್ಕೀರಪ್ಪ ಕುಂಬಾರ (34) ನೀರುಪಾಲಾದವರು.

ನದಿಯಲ್ಲಿ ಸ್ವಲ್ಪ ಮೀನುಗಳನ್ನು ಹಿಡಿದು, ದಂಡೆಗೆ ತಂದು ಸುರಿದಿದ್ದಾರೆ. ನಂತರ ಸ್ನಾನ ಮಾಡಲು ನದಿಗೆ ಇಳಿದ ಸಂದರ್ಭ ಒಬ್ಬ ಯುವಕ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಆತನನ್ನು ರಕ್ಷಿಸಲು ಹೋದ ಮತ್ತೊಬ್ಬ ಯುವಕ ಕೂಡ ನೀರು ಪಾಲಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವಕರ ಪತ್ತೆಗಾಗಿ ಸ್ಥಳೀಯರು ಮತ್ತು ಮುಳುಗು ತಜ್ಞರ ನೆರವಿನೊಂದಿಗೆ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದಾರೆ. ಇದುವರೆಗೂ ಯುವಕರ ಬಗ್ಗೆ ಸುಳಿವು ಸಿಕ್ಕಿಲ್ಲ.

ಅಕ್ರಮ ಮರಳು ಗಣಿಗಾರಿಕೆಯಿಂದಾಗಿ ನದಿ ತೀರದಲ್ಲಿ ಆಳವಾದ ಗುಂಡಿಗಳು ಸೃಷ್ಟಿಯಾಗಿವೆ. ನೀರಿನ ಆಳದ ಬಗ್ಗೆ ಸ್ಪಷ್ಟ ಅರಿವಿಲ್ಲದ ಯುವಕರು ನೀರಿಗಿಳಿದು ಜೀವ ತೆತ್ತಿದ್ದಾರೆ. ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಯುವಲ್ಲಿ ಪೊಲೀಸರು ಮತ್ತು ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

ರಾಣೆಬೆನ್ನೂರು ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT