ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿಶ್ವ ರಕ್ತದಾನಿಗಳ ದಿನ | ಹಾವೇರಿ ವಿಶ್ವವಿದ್ಯಾಲಯದಲ್ಲಿ 42 ಯೂನಿಟ್ ರಕ್ತದಾನ

Published 15 ಜೂನ್ 2024, 16:00 IST
Last Updated 15 ಜೂನ್ 2024, 16:00 IST
ಅಕ್ಷರ ಗಾತ್ರ

ಹಾವೇರಿ: ಇಲ್ಲಿಯ ಕೆರಿಮತ್ತಿಹಳ್ಳಿಯಲ್ಲಿರುವ ಹಾವೇರಿ ವಿಶ್ವವಿದ್ಯಾಲಯದಲ್ಲಿ ‘ವಿಶ್ವ ರಕ್ತದಾನಿಗಳ ದಿನ’ವನ್ನು ಅರ್ಥಪೂರ್ಣವಾಗಿ ಆಚರಿಸಿದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, 42 ಯೂನಿಟ್ ರಕ್ತದಾನ ಮಾಡಿದ್ದಾರೆ.

ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ಸೇವಾ ಯೋಜನೆಯ ವಿಶ್ವವಿದ್ಯಾಲಯ ಮಟ್ಟದ ನಾಯಕತ್ವ ತರಬೇತಿ ಶಿಬಿರದಲ್ಲಿ ಪಾಲ್ಗೊಂಡಿದ್ದ ಶಿಬಿರಾರ್ಥಿಗಳು ಹಾಗೂ ಶಿಕ್ಷಕರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಜೊತೆಗೆ, ರಕ್ತದಾನ ಮಾಡಿದವರಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಗಿದೆ.

ಶಿಬಿರದಲ್ಲಿ ಪಾಲ್ಗೊಂಡಿದ್ದ ಕುಲಪತಿ ಡಾ. ಸುರೇಶ್ ಜಂಗಮಶೆಟ್ಟಿ, ‘ಸಮುದಾಯಗಳ ಆರೋಗ್ಯ ಮತ್ತು ಯೋಗಕ್ಷೇಮ ಕಾಪಾಡುವಲ್ಲಿ ರಕ್ತದಾನ ಮಹತ್ವದ ಪಾತ್ರ ವಹಿಸುತ್ತದೆ’ ಎಂದರು.

ಹಾವೇರಿ ಜಿಲ್ಲಾ ರಕ್ತ ಬ್ಯಾಂಕ್ ವೈದ್ಯಾಧಿಕಾರಿ ಡಾ. ಬಸವರಾಜ ತಳವಾರ, ‘ಆರೋಗ್ಯ ಸೇವಾ ಕ್ಷೇತ್ರಕ್ಕೆ ಆರೋಗ್ಯಕರ ರಕ್ತದ ನಿರಂತರ ಪೂರೈಕೆ ಅಗತ್ಯವಾಗಿದೆ. ಸಮಾಜದ ಮುಂಚೂಣಿ ನಾಯಕರು, ಪ್ರತಿಯೊಬ್ಬರಲ್ಲಿ ರಕ್ತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.

ಕುಲಸಚಿವ ಪ್ರೊ. ಎಸ್.ಟಿ. ಬಾಗಲಕೋಟಿ, ಎನ್ಎಸ್ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ಸಿ.ಎಸ್. ಕುಮ್ಮೂರ, ಕಾರ್ಯಕ್ರಮ ಅಧಿಕಾರಿ ಡಾ. ವಿಶ್ವನಾಥ ಚಿಂತಾಮಣಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT