ರಾಣೆಬೆನ್ನೂರು: ಹಾವೇರಿ ವಿಶ್ವ ವಿದ್ಯಾಲಯದ ಅಭಿವೃದ್ಧಿ ದೃಷ್ಟಿಯಿಂದ ಪ್ರಥಮ ಘಟಿಕೋತ್ಸವ ಕಾರ್ಯಕ್ರಮವನ್ನು ಹಾವೇರಿ ವಿಶ್ವವಿದ್ಯಾಲಯದ ಆವರಣದಲ್ಲಿಯೇ ನಡೆಸಬೇಕು ಎಂದು ವಿವಿಧ ಸಂಘಟನೆಗಳ ಮುಖಂಡರು ಒತ್ತಾಯಿಸಿದರು.

ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ಮೆಣಸಿನಹಾಳ ತಿಮ್ಮನಗೌಡರ ಪ್ರತಿಮೆ ಎದುರು ಭಾನುವಾರ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿ, ವಿವಿ ನಡೆಗೆ ವಿರೋಧ ವ್ಯಕ್ತಪಡಿಸಿದರು.

ಖಾಸಗಿ ಕಾಲೇಜಿನಲ್ಲಿ ಕಾರ್ಯಕ್ರಮ ನಡೆಸುತ್ತಿರುವ ಉಪಕುಲಪತಿ ಸರ್ವಾಧಿಕಾರಿ ಧೋರಣೆ ಖಂಡಿಸಿದರು ಹಾಗೂ ರಾಜ್ಯಪಾಲರು ವಿ.ವಿಗೆ ಭೇಟಿ ನೀಡಿ ವಿವಿ ಅಭಿವೃದ್ಧಿಗೆ ಅನುದಾನ ಬಿಡುಗಡೆಗೆ ಶಿಫಾರಸು ಮಾಡಬೇಕು ಎಂದೂ ಆಗ್ರಹಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವೀಂದ್ರಗೌಡ ಪಾಟೀಲ ಮಾತನಾಡಿದರು.

ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್. ಮಾತನಾಡಿ, ವಿಶ್ವವಿದ್ಯಾಲಯದಅಭಿವೃದ್ಧಿಗಾಗಿ ಅಗತ್ಯವಿರುವ ಅನುದಾನ, ನೇಮಕಾತಿ, ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸುವುದು, ಸೂಕ್ತ ಆಡಳಿತಾತ್ಮಕ ನಿರ್ದೇಶನಗಳು ಸೇರಿದಂತೆ ಹಲವು ಪ್ರಮುಖ ಕ್ರಮಗಳನ್ನು ಕೈಗೊಳ್ಳಲು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದರು.

ವಕೀಲ ಮೃತ್ಯುಂಜಯ ಗುದಿಗೇರ, ಸಾಹಿತಿ ಬರಹಗಾರ ದೇವರಾಜ ಹುಣಸಿಕಟ್ಟಿ, ಸಾಹಿತಿ ಚಂಸು ಪಾಟೀಲ ಮಾತನಾಡಿದರು. ಕಸಾಪ ಗ್ರಾಮ ಘಟಕ ಅಧ್ಯಕ್ಷ ಮಾರುತಿ ತಳವಾರ, ಎಸ್ಎಫ್ಐ ಮುಖಂಡ ಅರುಣ್ ನಾಗವತ್, ಚಂದ್ರಪ್ಪ ಬೇಡರ, ಚಂದ್ರಶೇಖರ್ ಪಾಟೀಲ, ಕಾರ್ಮಿಕ ಸಂಘಟನೆಯ ಶೋಭಾ ಮುದೇನೂರು, ಮರಡೆಪ್ಪ ಚಳಗೆರೆ, ರಾಜ್ಯ ಕಾರ್ಮಿಕರ ಹಿತರಕ್ಷಣೆಯ ಪರಶುರಾಮ ಕುರವತ್ತಿ, ಹನುಮಂತ ಹರಿಜನ, ಕೊಟ್ರೇಶಪ್ಪ ಯಮ್ಮಿ, ಶಂಕರ ಹಳಪ್ಪನವರ, ಶರಣ ಸಪ್ಪಾಳಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-22-195213988

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.