ಹಾವೇರಿ: ಹೊಸರಿತ್ತಿ ಪೊಲೀಸ್ ಠಾಣೆಯಲ್ಲಿ ಸೆ.7ರಂದು ನಡೆದಿದೆ ಎನ್ನಲಾದ ‘ಲಾಕಪ್ ಡೆತ್’ ಪ್ರಕರಣದ ಕುರಿತು ಸಿಐಡಿ ತನಿಖೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಗೋವಿಂದಪ್ಪ ಪೂಜಾರ ಎನ್ನುವ ವ್ಯಕ್ತಿ ಹೊಸರಿತ್ತಿ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಆಗಿರುವ ಬಗ್ಗೆ ಸಾಕಷ್ಟು ಅನುಮಾನಗಳು ಮೂಡುತ್ತಿವೆ. ಈ ಪ್ರಕರಣ ಸ್ಥಳೀಯ ಪೊಲೀಸರಿಂದ ವಿಚಾರಣೆ ಸಾಧ್ಯವಿಲ್ಲ. ಸಿಐಡಿಯಿಂದ ವಿಚಾರಣೆ ಆಗಬೇಕು ಎಂದು ಈಗಾಗಲೇ ಪೊಲೀಸ್ ಮಹಾ ನಿರ್ದೇಶಕರಿಗೆ (ಡಿಜಿಪಿ) ಪತ್ರ ಬರೆದಿದ್ದೇನೆ ಎಂದು ಹೇಳಿದರು.
ಈ ಪ್ರಕರಣದಲ್ಲಿ ಬಹಳಷ್ಟು ಸಂಶಯಗಳಿವೆ. ಮೇಲ್ನೋಟಕ್ಕೆ ಪೊಲೀಸರ ಹಲ್ಲೆಯಿಂದ ವ್ಯಕ್ತಿ ಅಸ್ವಸ್ಥಗೊಂಡು ಸತ್ತಿದ್ದಾನೆಂದು ಅನಿಸುತ್ತಿದೆ. ಸ್ಪಷ್ಟವಾಗಿ ಏನೇನು ನಡೆದಿದೆ ಎಂಬ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಆಗ್ರಹಿಸಿದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.