ಹಾವೇರಿ: ಜಿಲ್ಲೆಯಾದ್ಯಂತ ಬೇಸಿಗೆಯ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಅದರ ಜೊತೆಯಲ್ಲಿ ನೀರಿನ ಸಮಸ್ಯೆಯೇ ಉಲ್ಭಣಿಸುತ್ತಿದೆ. ಹಲವು ಕಡೆಗಳಲ್ಲಿ ಜನರಿಗೆ ಕುಡಿಯಲು ಹಾಗೂ ಬಳಸಲು ನೀರು ಸಿಗುವುದು ದುಸ್ತರವಾಗಿದೆ. ನೀರಿಗಾಗಿ ಜನರು ರಸ್ತೆಗೆ ಇಳಿದು ಪ್ರತಿಭಟನೆ ನಡೆಸುವ ಸ್ಥಿತಿ ಬಂದಿದೆ. ಇದೇ ಕಾರಣಕ್ಕೆ, ಜಿಲ್ಲೆಯ ತುಂಗಭದ್ರಾ ನದಿಗೆ ಭದ್ರಾ ಜಲಾ ಶಯದಿಂದ ನೀರು ಬಿಡುವಂತೆ ಜಿಲ್ಲಾಧಿಕಾರಿಯವರು ಕೋರಿಕೆ ಸಲ್ಲಿಸಿದ್ದಾರೆ.

ಜಿಲ್ಲೆಯ ಹಲವು ಪ್ರದೇಶಗಳ ಮೂಲಕ ತುಂಗಭದ್ರಾ ನದಿ ಹರಿಯು ತ್ತಿದೆ. ನದಿಪಾತ್ರ ಹಾಗೂ ಸುತ್ತಮುತ್ತಲಿನ ಜನರಿಗೆ, ನದಿ ನೀರು ಆಸರೆಯಾಗಿದೆ. ಬೇಸಿಗೆ ಆರಂಭದ ದಿನದಿಂದಲೇ ತುಂಗಭದ್ರಾ ನದಿಯಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ನೀರು ಹರಿಯುವಿಕೆ ಬಂದ್ ಆಗಿದ್ದು, ಅಲ್ಲಲ್ಲಿ ನಿಂತ ನೀರನ್ನು ಜನರು ಬಳಸುತ್ತಿದ್ದಾರೆ.

ಪಶ್ಚಿಮ ಘಟ್ಟಗಳ ಅರೋಲಿ ಪರ್ವತ ಶ್ರೇಣಿಯ ತಪ್ಪಲಿನ ಗಂಗಾಮೂಲ ಎಂಬಲ್ಲಿ ಹುಟ್ಟುವ ಭದ್ರಾ ನದಿಯು, ಪೂರ್ವಾಭಿಮುಖವಾಗಿ ಹರಿಯುತ್ತಿದೆ. ಉಪನದಿಗಳಾದ ಸೋಮವಾಹಿನಿ, ತಡಬೇಹಳ್ಳ ಮತ್ತು ಓಡಿರಾಯನಹಳ್ಳಗಳ ಜೊತೆ ಸೇರಿ ಭದ್ರಾ ಅಭಯಾರಣ್ಯದ ಮೂಲಕ ಹರಿದು, ಶಿವಮೊಗ್ಗ ಜಿಲ್ಲೆಯ ‘ಕೂಡ್ಲಿ’ಯಲ್ಲಿ ತುಂಗಾ ನದಿಯೊಂದಿಗೆ ಸೇರುತ್ತದೆ.

ಅಲ್ಲಿಂದ, ತುಂಗಭದ್ರಾ ನದಿಯಾಗುತ್ತದೆ. ಈ ಭದ್ರಾ ನದಿಗೆ ಚಿಕ್ಕಮಗಳೂರು ಜಿಲ್ಲೆಯ ಲಕ್ಕವಳ್ಳಿ ಬಳಿ ಜಲಾಶಯ ನಿರ್ಮಿಸಲಾಗಿದೆ. ಇದೇ ಜಲಾಶಯದಿಂದ ನೀರು ಬಿಡುವಂತೆ ಕೋರಲಾಗಿದೆ.

‘ಜಿಲ್ಲೆಯಲ್ಲಿ ಮೇ ತಿಂಗಳಿನಲ್ಲಿ ಕುಡಿ ಯುವ ನೀರಿಗೆ ಹೆಚ್ಚಿನ ಬೇಡಿಕೆ ಬರಲಿದೆ. ಹೀಗಾಗಿ, ಭದ್ರಾ ಜಲಾಶಯದಿಂದ 0.1597 ಟಿಎಂಸಿ ಅಡಿ (452.22 ಕೋಟಿ ಲೀಟರ್) ನೀರು ಬಿಡುಗಡೆ ಮಾಡುವಂತೆ ಕೋರಲಾಗಿದೆ’ ಎಂದು ಡಿ.ಸಿ ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದರು.

‘ನೀರು ಬಿಟ್ಟ ಸಂದರ್ಭದಲ್ಲಿ ನದಿಯಿಂದ ಅನಧಿಕೃತವಾಗಿ ವಿದ್ಯುತ್/ಡೀಸೆಲ್ ಪಂಪ್ ಅಳವಡಿಸಿ ನೀರು ಎತ್ತುವುದನ್ನು ನಿಷೇಧಿಸಲಾಗಿದೆ. ಟ್ಯಾಂಕರ್ ಮೂಲಕ ನೀರು ಕೊಂಡೊಯ್ಯುವುದನ್ನೂ ಬಂದ್ ಮಾಡಲಾಗಿದೆ. ಈ ಬಗ್ಗೆ ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿಗೆ ಸೂಚನೆ ನೀಡಲಾ ಗಿದೆ’ ಎಂದು ಅವರು ಹೇಳಿದರು.

ಮೈಸೂರು ಪ್ರಾದೇಶಿಕ ಆಯುಕ್ತರಿಗೂ ಪತ್ರ: ಹಾವೇರಿ ಜಿಲ್ಲೆಯಲ್ಲಿ ಉಂಟಾಗುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಭದ್ರಾ ಜಲಾಶಯದಿಂದ ತುರ್ತಾಗಿ ನೀರು ಬಿಡುಗಡೆ ಮಾಡುವಂತೆ ಕೋರಿ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ಮೇ 8ರಂದು ಪತ್ರ ಬರೆದ್ದಾರೆ.

‘ನೀರು ಬಿಡುಗಡೆಗಾಗಿ ಹಾವೇರಿ ಜಿಲ್ಲಾಧಿಕಾರಿಯವರು ಕೋರಿಕೆ ಸಲ್ಲಿಸಿದ್ದಾರೆ. ಯೋಜನಾ ನಿರ್ದೇಶಕರು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳು ಸಹ ನೀರಿನ ಬೇಡಿಕೆ ತಿಳಿಸಿದ್ದಾರೆ.

ನಗರ ಸ್ಥಳೀಯ ಸಂಸ್ಥೆಗಳಿಗೆ 0.1077 ಟಿಎಂಸಿ ಅಡಿ, ಬಹುಗ್ರಾಮ ಕುಡಿಯುವ ನೀರು ಯೋಜನೆಯ ಹಳ್ಳಿಗಳಿಗೆ 0.052 ಟಿಎಂಸಿ ಅಡಿ ನೀರಿನ ಅಗತ್ಯವಿರುವುದಾಗಿ ಹೇಳಿದ್ದಾರೆ’ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

‘ಹಾವೇರಿ ಜಿಲ್ಲೆಗೆ ಅಗತ್ಯವಿರುವ ನೀರನ್ನು ಹಂತ ಹಂತವಾಗಿ ಭದ್ರಾ ಜಲಾಶಯದ ಮೂಲಕ ತುಂಗಭದ್ರಾ ನದಿಗೆ ಹರಿಸಬೇಕು’ ಎಂದು ಪತ್ರದಲ್ಲಿ ಕೋರಲಾಗಿದೆ.

70 ಖಾಸಗಿ ಕೊಳವೆಬಾವಿ ಬಾಡಿಗೆ: ‘ಜಿಲ್ಲೆಯ 57 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಲ್ಭಣಿಸಿದೆ. ಅಲ್ಲಿಯ ಜನರಿಗೆ ನೀರು ಪೂರೈಕೆ ಮಾಡಲು, 70 ಕಡೆಗಳಲ್ಲಿ ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆ ಪಡೆಯಲಾಗಿದೆ. ಅದರ ಮೂಲಕ ಜನರಿಗೆ ನೀರು ಸರಬರಾಜು ಮಾಡಲಾಗುತ್ತಿದೆ’ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ಮಾಹಿತಿ ನೀಡಿದ್ದಾರೆ.

‘ಕುಡಿಯುವ ನೀರಿನ ಸಮಸ್ಯೆ ತೀವ್ರಗೊಳ್ಳದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ 576 ಖಾಸಗಿ ಕೊಳವೆ ಬಾವಿ ಹಾಗೂ 3,591 ಸಾರ್ವಜನಿಕ ಕೊಳವೆ ಬಾವಿಗಳನ್ನು ಗುರುತಿಸಲಾಗಿದೆ. ನಗರ ಪ್ರದೇಶಗಳಲ್ಲಿ 1,444 ಸಾರ್ವಜನಿಕ ಬಾವಿಗಳನ್ನು ಗುರುತಿಸಲಾಗಿದೆ. ವರದಾ, ತುಂಗಭದ್ರಾ ನದಿಯಿಂದ ಹಾಗೂ ಹಾವೇರಿಯ ಹೆಗ್ಗೇರಿಯಿಂದಲೂ ನೀರು ಪಡೆಯಲು ಅವಕಾಶಗಳಿವೆ’ ಎಂದು ಹೇಳಿದ್ದಾರೆ.

‘286 ಹಳ್ಳಿಗಳ ಪಟ್ಟಿ ಸಿದ್ಧ’

‘ಬೇಡಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದಾದ 286 ಹಳ್ಳಿಗಳ ಪಟ್ಟಿ ಸಿದ್ಧಪಡಿಸಲಾಗಿದೆ. ಅಂಥ ಹಳ್ಳಿಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ. ತಹಶೀಲ್ದಾರ್ ಅವರು ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದ್ದಾರೆ’ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ತಿಳಿಸಿದರು.

‘ನಗರ ಪ್ರದೇಶದ 60 ವಾರ್ಡ್ಗಳಲ್ಲಿ ನೀರಿನ ಸಮಸ್ಯೆ ಉಂಟಾಗಬಹುದು. ಎಲ್ಲ ಕಡೆಯೂ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದೆ. ಅಗತ್ಯಬಿದ್ದರೆ, ಟ್ಯಾಂಕರ್ ಮೂಲಕವೂ ನೀರು ಸರಬರಾಜು ಮಾಡಲಾಗುವುದು’ ಎಂದು ಹೇಳಿದರು.

ನೀರಿನ ಸಮಸ್ಯೆಗೆ ಸಹಾಯವಾಣಿ

ಹಾವೇರಿ ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ಉಂಟಾಗುವ ಕುಡಿಯುವ ನೀರಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಸಹಾಯವಾಣಿ (08375-232522) ಸ್ಥಾಪಿಸಲಾಗಿದೆ. ಜೂನ್ 15ರವರೆಗೂ ಸಹಾಯವಾಣಿ ಕಾರ್ಯನಿರ್ವಹಿಸಲಿದೆ. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆವರೆಗೆ ಸಹಾಯವಾಣಿ ಕಾರ್ಯನಿರ್ವಹಿಸಲಿದೆ. ಸಾರ್ವಜನಿಕರು ಕರೆ ಮಾಡಿ ದೂರು ದಾಖಲಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-22-1589157709

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.