ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಸ್ಕ್‌ ಧರಿಸಿ, ಸೋಂಕು ತಡೆಗಟ್ಟಿ: ಹಾವೇರಿ ಜಿಲ್ಲಾಧಿಕಾರಿ

ಸಾರ್ವಜನಿಕ ಸ್ಥಳದಲ್ಲಿ ಉಗುಳಬೇಡಿ: ಶವಸಂಸ್ಕಾರಕ್ಕೆ 20 ಮಂದಿಗೆ ಅವಕಾಶ
Last Updated 1 ಜುಲೈ 2020, 15:11 IST
ಅಕ್ಷರ ಗಾತ್ರ

ಹಾವೇರಿ: ಜಿಲ್ಲೆಯಲ್ಲಿ ಕೋವಿಡ್-19 ವೈರಾಣು ಸೋಂಕಿನಿಂದ ಸಂಭವಿಸಬಹುದಾದ ಅನಾಹುತಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಸರ್ಕಾರದ ಮಾರ್ಗಸೂಚಿಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸಲು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕ ಸ್ಥಳಗಳು ಹಾಗೂ ಕೆಲಸದ ಸ್ಥಳಗಳಲ್ಲಿ ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಧರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ವಾಹನಗಳಲ್ಲಿ ಪ್ರಯಾಣಿಸುವ ಸಂದರ್ಭಗಳಲ್ಲಿ ಹಾಗೂ ವಿವಾಹ ಕಾರ್ಯಕ್ರಮ, ಶವ ಸಂಸ್ಕಾರ ಸಂದರ್ಭದಲ್ಲಿ ಕಡ್ಡಾಯವಾಗಿ ಅಂತರ ಕಾಯ್ದುಕೊಳ್ಳಬೇಕು. ವಿವಾಹಕ್ಕೆ ಅನುಮತಿ ಕೋರಿ ತಹಶೀಲ್ದಾರ್‌ಗೆ ಅರ್ಜಿ ಸಲ್ಲಿಸುವಾಗ ಮುಚ್ಚಳಿಕೆ ಸಲ್ಲಿಸುವುದು ಕಡ್ಡಾಯವಾಗಿದೆ. ಶವ ಸಂಸ್ಕಾರದಲ್ಲಿ 20 ಜನಕ್ಕಿಂತ ಹೆಚ್ಚು ಜನ ಸೇರುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಉಗುಳುವುದು ನಿಷೇಧ:

ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು, ಮದ್ಯಪಾನ, ಪಾನ್‌ಬೀಡಾ, ಗುಟಕಾ ಹಾಗೂ ತಂಬಾಕು ಸೇವನೆ ನಿಷೇಧಿಸಲಾಗಿದೆ. ಮದ್ಯ ಮಾರಾಟ ಅಂಗಡಿ, ಪಾನ್, ಬೀಡಾ, ಗುಟಕಾ, ತಂಬಾಕು ಮಾರಾಟದ ಅಂಗಡಿಗಳ ಬಳಿ ಸಾರ್ವಜನಿಕರು ಕನಿಷ್ಠ 6 ಅಡಿ ಅಂತರ ಕಾಪಾಡುವುದು ಹಾಗೂ ಅಂಗಡಿಗಳ ಬಳಿ ಐದಕ್ಕಿಂತ ಹೆಚ್ಚಿನ ಜನತೆ ನಿಲ್ಲದಂತೆ ಮಾಲೀಕರು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.

ಕಂಟೈನ್‌ಮೆಂಟ್‌ ಜೋನ್‍ಗಳಲ್ಲಿ ಶಾಲಾ- ಕಾಲೇಜುಗಳು, ವಿವಿಧ ತರಬೇತಿ ಸಂಸ್ಥೆ ಆರಂಭಿಸುವುದನ್ನು ಜುಲೈ 31ರವರೆಗೆ ನಿಷೇಧಿಸಲಾಗಿದೆ. ಆದರೆ, ಆನ್‍ಲೈನ್ ಶಿಕ್ಷಣ ಕೊಡಬಹುದಾಗಿದೆ. ಸರ್ಕಾರಿ ತರಬೇತಿ ಸಂಸ್ಥೆಗಳಿಗೆ ಜುಲೈ 15ರಿಂದ ಡಿಪಿಎಆರ್‌ ಇಲಾಖೆ ಹೊರಡಿಸುವ ಎಸ್‌ಒಪಿ ಆಧಾರದ ಮೇಲೆ ಅನುಮತಿಸಲಾಗುವುದು ಎಂದು ತಿಳಿಸಿದ್ದಾರೆ.

ಚಿತ್ರಮಂದಿರ, ಜಿಮ್‌ಗಳಿಗೆ ನಿರ್ಬಂಧ:

ಚಿತ್ರಮಂದಿರ, ಜಿಮ್ನಾಷಿಯಿಂ, ಈಜುಕೊಳ, ಮನಜರಂಜನಾ ಉದ್ಯಾನ, ಬಾರ್‌ಗಳು ಮತ್ತು ಸಭಾಂಗಣಗಳು, ಅಸೆಂಬ್ಲಿ ಹಾಲ್‍ಗಳು ಮತ್ತು ಅಂತಹುದೇ ಸ್ಥಳಗಳಲ್ಲಿ ನಡೆಯುವ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಎಲ್ಲಾ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕಂತಿಕ, ಧಾರ್ಮಿಕ ಕಾರ್ಯಕ್ರಮಗಳು, ಇತರೆ ಗುಂಪುಗೂಡುವಿಕೆ, ದೊಡ್ಡ ಸಭೆಗಳನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ.

ಆರೋಗ್ಯ ಸೇತು ಆ್ಯಪ್‌ ಬಳಕೆ:

ಪ್ರತಿಯೊಬ್ಬ ಸಾರ್ವಜನಿಕರು ‘ಆರೋಗ್ಯ ಸೇತು’ ಆ್ಯಪ್‌ ಡೌನ್‍ಲೋಡ್ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಸೋಂಕಿನ ಸಂಭವನೀಯ ಅಪಾಯವನ್ನು ಮೊದಲೇ ಗುರುತಿಸಲು ಈ ಆ್ಯಪ್‌ನಿಂದ ಅನುಕೂಲವಾಗಲಿದ್ದು, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳ ನೌಕರರು, ಅಧಿಕಾರಿಗಳು, ಮುಖ್ಯಸ್ಥರು ಕಡ್ಡಾಯವಾಗಿ ಆ್ಯಪ್‌ಗಳನ್ನು ಬಳಕೆ ಮಾಡಬೇಕು. ಮುಖ್ಯಸ್ಥರು ಖಚಿತಪಡಿಸಿಕೊಳ್ಳಲು ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT