ಹಾವೇರಿ: ‘ಗ್ರಾಮೀಣ ಆಡಳಿತ ವ್ಯವಸ್ಥೆಗೆ ಸಾಂವಿಧಾನಿಕ ಸ್ಥಾನಮಾನ ನೀಡಿದ 73ನೇ ಸಂವಿಧಾನ ತಿದ್ದುಪಡಿ ಕಾಯ್ದೆ ಜಾರಿಗೆ ಬಂದ ದಿನವನ್ನು ‘ರಾಷ್ಟ್ರೀಯ ಪಂಚಾಯತಿ ರಾಜ್ ದಿನ’ವನ್ನು ಆಚರಿಸಲಾಗುತ್ತಿದೆ. ಈ ತಿದ್ದುಪಡಿಯ ಮೂಲಕ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡಿರುವುದು, ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ಮಹತ್ತರ ಉತ್ತೇಜನ ಸಿಕ್ಕಿದೆ. ಅನೇಕ ರಾಜ್ಯಗಳಲ್ಲಿ ಈ ಮೀಸಲಾತಿಯನ್ನು ಶೇ 50ರವರೆಗೆ ವಿಸ್ತರಿಸಲಾಗಿದೆ. ಇದು ಮಹಿಳೆಯರ ನಾಯಕತ್ವ ಬಲಪಡಿಸಿದೆ’ ಎಂದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್ ಹೇಳಿದರು.

ನಗರದ ಹೊರವಲಯದಲ್ಲಿರುವ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ‘ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಸಮಾಜದ ಎಲ್ಲ ವರ್ಗಗಳ ಪ್ರತಿನಿಧಿತ್ವವನ್ನು ಖಚಿತಪಡಿಸುವುದು ಹಾಗೂ ಮಹಿಳೆಯರು, ಅನುಸೂಚಿತ ಜಾತಿ ಮತ್ತು ಪಂಗಡದವರಿಗೆ ಮೀಸಲಾತಿ ನೀಡಿ ಸಮಾನ ಅವಕಾಶ ಕಲ್ಪಿಸುವುದು ತಿದ್ದುಪಡಿಯ ಉದ್ದೇಶ’ ಎಂದರು.

‘ಪಂಚಾಯತ್ ರಾಜ್ ವ್ಯವಸ್ಥೆಯು ದೇಶದ ಅಭಿವೃದ್ಧಿಯ ಆಧಾರ ಸ್ತಂಭವಾಗಿದೆ. ಗ್ರಾಮೀಣ ಮಟ್ಟದಲ್ಲಿ ಜನರ ಅಗತ್ಯಗಳಿಗೆ ಸ್ಪಂದಿಸುವ ಆಡಳಿತವೇ ನಿಜವಾದ ಪ್ರಜಾಪ್ರಭುತ್ವದ ಸಾರ್ಥಕತೆಯಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಪಂಚಾಯಿತಿಗಳ ಮೂಲಕ ಪರಿಣಾಮಕಾರಿಯಾಗಿ ಜಾರಿಗೆ ತರಲು ಅಧಿಕಾರಿಗಳು ಇನ್ನಷ್ಟು ಹೊಣೆಗಾರಿಕೆಯಿಂದ ಕೆಲಸ ಮಾಡಬೇಕು’ ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

‘ಗ್ರಾಮ ಸಭೆಗಳಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಗ್ರಾಮಸಭೆಯು ಜನರ ನೇರ ಪಾಲ್ಗೊಳ್ಳುವಿಕೆಯನ್ನು ಪ್ರತಿಬಿಂಬಿಸುವ ವೇದಿಕೆಯಾಗಿದೆ. ಗ್ರಾಮದಲ್ಲಿ ನಡೆಯುವ ಅಭಿವೃದ್ಧಿ ಕಾರ್ಯಗಳು, ಯೋಜನೆಗಳ ಆಯ್ಕೆ, ವೆಚ್ಚದ ಪರಿಶೀಲನೆ ಹಾಗೂ ಸಾಮಾಜಿಕ ಲೆಕ್ಕಪತ್ರಗಳು ಗ್ರಾಮಸಭೆಯ ಮೂಲಕ ಪರಿಶೀಲನೆಗೆ ಒಳಪಡುತ್ತವೆ. ಇದು ಪಾರದರ್ಶಕತೆ ಮತ್ತು ಜವಾಬ್ದಾರಿತ್ವವನ್ನು ಹೆಚ್ಚಿಸಲು ಸಹಕಾರಿ ಆಗಿದೆ’ ಎಂದರು.

ಗ್ರಾ.ಪಂ. ವ್ಯಾಪ್ತಿಗೆ 29 ವಿಷಯಗಳು: ‘ಪಂಚಾಯತ್ಗಳಿಗೆ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಹಸ್ತಾಂತರಿಸಲಾಗಿದೆ. ಕೃಷಿ, ನೀರು ನಿರ್ವಹಣೆ, ಗ್ರಾಮೀಣ ರಸ್ತೆ, ಆರೋಗ್ಯ, ಶಿಕ್ಷಣ, ಕುಡಿಯುವ ನೀರು, ಸ್ವಚ್ಛತೆ ಹಾಗೂ ಇತರೆ 29 ವಿಷಯಗಳು ಪಂಚಾಯಿತಿ ವ್ಯಾಪ್ತಿಯಲ್ಲಿವೆ. ಇದರಿಂದ ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಲು ಮತ್ತು ಜಾರಿಗೆ ತರಲು ಪಂಚಾಯತ್ಗಳು ಸಬಲವಾಗಿವೆ’ ಎಂದು ರುಚಿ ಬಿಂದಲ್ ತಿಳಿಸಿದರು.

‘ಮಹಾತ್ಮ ಗಾಂಧೀಜಿಯವರ ಕನಸು ‘ಗ್ರಾಮ ಸ್ವರಾಜ್ಯ’ ಆಗಿತ್ತು. ಅದೇ ದಿಕ್ಕಿನಲ್ಲಿ ಪಂಚಾಯತ್ ವ್ಯವಸ್ಥೆ ಮಹತ್ತರ ಪಾತ್ರ ವಹಿಸುತ್ತಿದೆ. ಸರ್ಕಾರದ ವಿವಿಧ ಯೋಜನೆಗಳನ್ನು ತಳಮಟ್ಟಕ್ಕೆ ತಲುಪಿಸುವಲ್ಲಿ ಪಂಚಾಯತ್ಗಳು ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿವೆ. ಡಿಜಿಟಲ್ ತಂತ್ರಜ್ಞಾನ ಬಳಕೆ, ಪಾರದರ್ಶಕ ಆಡಳಿತ ಮತ್ತು ಜನ ಸಹಭಾಗಿತ್ವದ ಮೂಲಕ ಪಂಚಾಯತ್ಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿವೆ’ ಎಂದರು.

ಅತ್ಯುತ್ತಮ ಸೇವಾ ಪುರಸ್ಕಾರ: 2025–26ನೇ ಸಾಲಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು– ಸಿಬ್ಬಂದಿಗಳಿಗೆ ‘ಅತ್ಯುತ್ತಮ ಸೇವಾ ಪುರಸ್ಕಾರ’ ನೀಡಿ ಪ್ರೋತ್ಸಾಹಿಸಲಾಯಿತು.

ತೆರಿಗೆ ವಸೂಲಿಯನ್ನು ಸಾಧನೆ ಮಾಡಿದ ರಟ್ಟೀಹಳ್ಳಿ ತಾಲ್ಲೂಕು ಪಂಚಾಯತಿಯ ಅಧಿಕಾರಿಗಳನ್ನು ಸನ್ಮಾನಿಸಲಾಯಿತು. ಗ್ರಾ.ಪಂ.ಗಳ ಪೈಕಿ ಅತೀ ಹೆಚ್ಚು ತೆರಿಗೆ ಸಂಗ್ರಹಿಸಿದ ಶಿಗ್ಗಾವಿ ತಾಲ್ಲೂಕಿನ ನಾರಾಯಣಪುರ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ನಾಗರಾಜ ತರವಂದ ಹಾಗೂ ಬಿಲ್ ಸಂಗ್ರಹಗಾರ ಕೃಷ್ಣ ಕುಲಕರ್ಣಿ ಅವರನ್ನು ಸನ್ಮಾನಿಸಲಾಯಿತು. ಮಾದರಿ ಅರಿವು ಕೇಂದ್ರವಾದ ಹಾವೇರಿ ತಾಲ್ಲೂಕಿನ ಹಾವನೂರ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಬಸವರಾಜ ಮುಂಡವಾಡ ಹಾಗೂ ಗ್ರಂಥಾಲಯ ಮೇಲ್ವಿಚಾರಕ ಕೋಟಪ್ಪ ಪುಟ್ಟಪ್ಪ ಕೆಂಗನಿಂಗಪ್ಪನವರ ಅವರನ್ನು ಅಭಿನಂದಿಸಲಾಯಿತು.

ಜಿ.ಪಂ. ಉಪ ಕಾರ್ಯದರ್ಶಿ ಪುನೀತ್, ಯೋಜನಾ ನಿರ್ದೇಶಕರಾದ ರೇಖಾ ಡೊಳ್ಳಿನ, ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-22-1941558602

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.