ಹಾವೇರಿ: ಮನೆಯ ಚಾವಣಿ ಮೇಲೆ ಮಲಗಿದ್ದ ವೇಳೆ ವಿಷ ಜಂತುವೊಂದು ಕಡಿದು ತೀವ್ರ ಅಸ್ವಸ್ಥಗೊಂಡು ಮಂಜುನಾಥ ಬಸವಣ್ಣೆಪ್ಪ ಹುಣಸೀಕಟ್ಟಿ (35) ಎಂಬುವವರು ಮೃತಪಟ್ಟಿದ್ದು, ಈ ಬಗ್ಗೆ ಸವಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ತೆವರಮೆಳಹಳ್ಳಿ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. ಮಂಜುನಾಥ್ ಅವರ ತಂದೆ ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಮಂಜುನಾಥ ಅವರು ಮೇ 27ರಂದು ರಾತ್ರಿ ಮನೆಯಲ್ಲಿ ಊಟ ಮಾಡಿದ್ದರು. ನಂತರ, ರಾತ್ರಿ 10 ಗಂಟೆ ಸುಮಾರಿಗೆ ಮನೆಯ ಚಾವಣಿ ಮೇಲೆ ಹೋಗಿ ಮಲಗಿದ್ದರು. ಅದೇ ಸಂದರ್ಭದಲ್ಲಿಯೇ ಅವರ ಮುಖಕ್ಕೆ ವಿಷಜಂತುವೊಂದು ಕಡಿದಿತ್ತು ಎಂದು ಹೇಳಲಾಗುತ್ತಿದೆ. ಚಿಕಿತ್ಸೆಗಾಗಿ ಅವರನ್ನು ಹುಬ್ಬಳ್ಳಿಯ ಕೆಎಂ–ಸಿಆರ್ಐ (ಕಿಮ್ಸ್) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಯೇ ಅವರು ಶುಕ್ರವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.