ಹಾವೇರಿ: ಹಾವೇರಿ ಜಿಲ್ಲೆಯ ಶಿಗ್ಗಾವಿ ಬಳಿಯ ತಡಸ ಕ್ರಾಸ್ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.

ತಿಮ್ಮಾಪುರ ಗ್ರಾಮದ ಬಳಿ ಬುಧವಾರ ಮಧ್ಯಾಹ್ನ ಅಪಘಾತ ಆಗಿದೆ. ಬೆಂಗಳೂರಿನ ನಿವಾಸಿಗಳು ಎನ್ನಲಾದ ತಂದೆ-ತಾಯಿ ಹಾಗೂ ಅವರಿಬ್ಬರ ಮಕ್ಕಳು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಅತೀ ವೇಗವಾಗಿ ಹೊರಟಿದ್ದ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದಿವೆ. ಇದರಿಂದಾಗಿ, ಒಂದು ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಇನ್ನಿಬ್ಬರನ್ನು ಹುಬ್ಬಳ್ಳಿ ಕಿಮ್ಸ್ಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿಯೇ ಅವರಿಬ್ಬರು ಅಸುನೀಗಿದ್ದಾರೆ.

ಇನ್ನೊಂದು ಕಾರಿನಲ್ಲಿದ್ದ ಚಾಲಕ ಹಾಗೂ ಇತರರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

'ಅಪಘಾತದಿಂದ ಒಂದು ಕಾರು ನಜ್ಜುಗುಜ್ಜಾಗಿದೆ' ಎಂದು ಪೊಲೀಸರು ತಿಳಿಸಿದರು.

ಬೆಂಗಳೂರು ಚಾಮರಾಜಪೇಟೆಯ ಚಂದ್ರಮ್ಮ (59), ಅವರ ಮಗಳು ದಾವಣಗೆರೆ ಜಿಲ್ಲೆಯ ಹರಿಹರದ ಮೀನಾ (38), ಕಾರು ಚಾಲಕ ಮಹೇಶಕುಮಾರ ಸಿ. (41) ಹಾಗೂ ಹರಿಹರದ ಧನ್ವೀರ್ (11) ಮೃತಪಟ್ಟವರು.
.ಜಮ್ಮುವಿನ ಪೂಂಛ್ ಬಳಿ ಸೇನಾ ವಾಹನ ಅಪಘಾತ: ಕರ್ನಾಟಕದ ಮೂವರು ಯೋಧರ ಸಾವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.