ಹಾವೇರಿ: ‘ಜಿಲ್ಲೆಯಲ್ಲಿರುವ ತಾಲ್ಲೂಕು ಆರೋಗ್ಯಾಧಿಕಾರಿಗಳು ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ, ಗರ್ಭಿಣಿಯರು, ಬಾಣಂತಿಯರು, ಶಿಶುಗಳ ಆರೋಗ್ಯದ ಬಗ್ಗೆ ವಿಚಾರಣೆ ಮಾಡಬೇಕು. ಆದರೆ, ಯಾರಿಗೂ ಕೆಲಸದಲ್ಲಿ ಆಸಕ್ತಿ ಕಾಣುತ್ತಿಲ್ಲ. ಬರುವ ದಿನಗಳಲ್ಲಿ ಅತ್ಯಂತ ಜವಾಬ್ದಾರಿಯಿಂದ ಕೆಲಸ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ ಅವರು ಆರೋಗ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಜಿಲ್ಲಾ ಆರೋಗ್ಯ ಅಭಿಯಾನದ ಪ್ರಗತಿ ಪರಿಶೀಲನಾ ಸಭೆ’ ಹಾಗೂ ‘ಜಿಲ್ಲಾ ಕಣ್ಗಾವಲು ಸಮಿತಿ ಸಭೆ’ಯಲ್ಲಿ ಪಾಲ್ಗೊಂಡಿದ್ದ ಅವರು, ಗರ್ಭಿಣಿಯರ ನೋಂದಣಿ, ಅವಧಿಗೆ ಮುನ್ನ ಹೆರಿಗೆ ಪ್ರಮಾಣ ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾಹಿತಿ ಪಡೆದುಕೊಂಡರು.

‘ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಆರೋಗ್ಯ ಇಲಾಖೆಯ ಪಾತ್ರ ಮುಖ್ಯವಾಗಿದೆ. ಸರ್ಕಾರದ ಆರೋಗ್ಯ ಯೋಜನೆಗಳು ಎಲ್ಲರಿಗೂ ತಲುಪಿಸಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಅತ್ಯಂತ ಕಾಳಜಿಯಿಂದ ಹಾಗೂ ಮುತುವರ್ಜಿಯಿಂದ ಕೆಲಸ ಮಾಡಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ಜಿಲ್ಲೆಯಲ್ಲಿ ಗರ್ಭಿಣಿಯರ ನೋಂದಣಿ ವಿಳಂಬವಾಗದಂತೆ ಎಚ್ಚರಿಕೆ ವಹಿಸಬೇಕು. ಅವಧಿಗೂ ಮುನ್ನ ಹೆರಿಗೆಯಾಗುತ್ತಿರುವ ಬಗ್ಗೆ ಕಾರಣಗಳನ್ನು ತಿಳಿದುಕೊಳ್ಳಬೇಕು. ಗ್ರಾಮೀಣ ಪ್ರದೇಶದಲ್ಲಿ ಗರ್ಭಿಣಿಯರ ನೋಂದಣಿಗೆ ಆದ್ಯತೆ ನೀಡಬೇಕು. ಆರೋಗ್ಯ ಇಲಾಖೆಯ ಸೌಲಭ್ಯಗಳ ಕುರಿತು ಮಾಹಿತಿ ನೀಡುವಂತೆ ಆಶಾ ಕಾರ್ಯಕರ್ತರಿಗೆ ಸೂಚಿಸಬೇಕು’ ಎಂದು ಹೇಳಿದರು.

‘ಗರ್ಭಿಣಿಯರು, ಬಾಣಂತಿಯರು ಹಾಗೂ ಶಿಶುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಸಹಿಬೇಕು. ಅವರಿಗೆ ಕಾಲಕಾಲಕ್ಕೆ ಅಗತ್ಯ ಚುಚ್ಚುಮದ್ದು ಹಾಗೂ ಮಾತ್ರೆಗಳನ್ನು ನೀಡಬೇಕು. ತುರ್ತು ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ಬರುವ ರೋಗಿಗಳಿಗೆ ಬೇರೆ ಆಸ್ಪತ್ರೆಗೆ ಕಳುಹಿಸುವ ಮೊದಲು ಅಗತ್ಯ ಪ್ರಥಮ ಚಿಕಿತ್ಸೆ ಒದಗಿಸಬೇಕು’ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

‘ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಅಗತ್ಯ ಚುಚ್ಚುಮದ್ದು, ಔಷಧಿಗಳು ಹಾಗೂ ಮಾತ್ರೆಗಳು, ನಾಯಿ ಕಡಿತ ಹಾಗೂ ಹಾವು ಕಡಿತಕ್ಕೆ ನೀಡುವ ಚುಚ್ಚುಮದ್ದುಗಳ ದಾಸ್ತಾನು ಮಾಡಿಕೊಳ್ಳಬೇಕು. ಬಡವರಿಗೆ ಅಗತ್ಯ ಆರೋಗ್ಯ ಸೇವೆ ಸಿಗುವಂತಾಗಬೇಕು’ ಎಂದರು.

ಅಧಿಕಾರಿಗಳಿಗೆ ನೋಟಿಸ್: ‘ಸಾರ್ವಜನಿಕ ವಲಯದಲ್ಲಿ ಡೆಂಗಿ ಲಾರ್ವಾ ಉತ್ಪತ್ತಿ ಸ್ಥಳಗಳು ಕಂಡುಬಂದಲ್ಲಿ ಗ್ರಾಮೀಣ ಭಾಗದಲ್ಲಿ ಪಂಚಾಯತ್ ಅಧಿಕಾರಿಗಳಿಗೆ ಹಾಗೂ ನಗರ ಪ್ರದೇಶದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ನೋಟೀಸ್ ನೀಡಬೇಕು’ ಎಂದು ಜಿಲ್ಲಾಧಿಕಾರಿಯವರು ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಆರೋಗ್ಯಾಧಿಕಾರಿ (ಪ್ರಭಾರ) ಡಾ. ಎಂ. ಜಯಾನಂದ, ಡಾ. ನೀಲೇಶ, ಡಾ. ಜಗದೀಶ ಪಾಟೀಲ, ಡಾ. ಚನ್ನವೀರಯ್ಯ ವಿರಕ್ತಮಠ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಪ್ರಭಾಕರ ಕುಂದೂರ ಸಭೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.