ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ಹಿಂದಿ ಹೇರಿಕೆ; ಕರವೇ ಖಂಡನೆ

Last Updated 14 ಸೆಪ್ಟೆಂಬರ್ 2021, 15:19 IST
ಅಕ್ಷರ ಗಾತ್ರ

ಹಾವೇರಿ:ಕೇಂದ್ರ ಸರ್ಕಾರ ಸೆ.14ರಂದು ‘ಹಿಂದಿ ದಿವಸ್’ ಎಚರಿಸಲು ಸೂಚಿಸಿರುವುದನ್ನು ವಿರೋಧಿಸಿ ಹಾಗೂ ಆಡಳಿತದಲ್ಲಿ ಹಿಂದಿಯನ್ನು ಹೇರುತ್ತಿರುವ ನೀತಿಯನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮತ್ತು ಮುಖಂಡರು ನಗರದ ಕೆನರಾ ಬ್ಯಾಂಕ್‌ ಮತ್ತು ಎಸ್‌ಬಿಐ ಬ್ಯಾಂಕ್‌ಗಳ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು.

‘ಸಂವಿಧಾನದ ಪ್ರಕಾರ, ದೇಶಕ್ಕೆ ಯಾವುದೇ ರಾಷ್ಟ್ರೀಯ ಭಾಷೆಯಿಲ್ಲ. ದೇಶದ 22 ಭಾಷೆಗಳಿಗೆ ರಾಷ್ಟ್ರೀಯ ಸ್ಥಾನಮಾನವನ್ನು ನೀಡಲಾಗಿದ್ದು, ಅದರಲ್ಲಿ ಕನ್ನಡ ಮತ್ತು ಹಿಂದಿ ಭಾಷೆಗಳೂ ಸೇರಿವೆ.ಹಿಂದಿ ದಿವಸ, ಹಿಂದಿ ಸಪ್ತಾಹ, ಹಿಂದಿ ಪಕ್ವಾಡದಂತಹ ಕಾರ್ಯಕ್ರಮಗಳನ್ನು ಕೂಡಲೇ ನಿಲ್ಲಿಸಬೇಕು. ಪ್ರತಿ ವರ್ಷ ಸೆ.14ರಂದು ಆಚರಿಸುವ ಹಿಂದಿ ದಿನಾಚರಣೆ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಶಿಕ್ಷಣ, ಉದ್ಯೋಗ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಎಲ್ಲ ಭಾಷೆಗಳಿಗೂ ಸಮಾನ ಅವಕಾಶ, ಹಕ್ಕುಗಳು ಇರಬೇಕು. ಭಾರತ ಬಹುಭಾಷೆ, ಸಂಸ್ಕೃತಿ ಮತ್ತು ಧರ್ಮಗಳ ನಾಡು. ಈ ಬಹುತ್ವ ಉಳಿದರಷ್ಟೇ ಒಕ್ಕೂಟ ಉಳಿಯಲು ಸಾಧ್ಯ. ಒಕ್ಕೂಟ ವ್ಯವಸ್ಥೆಯ ಈ ಮೂಲಮಂತ್ರವನ್ನೇ ಸರ್ಕಾರ ಕಡೆಗಣಿಸುತ್ತಿರುವುದು ದುರ್ದೈವದ ಸಂಗತಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸಂಸದ ಶಿವಕುಮಾರ ಉದಾಸಿಯವರ ಕಚೇರಿ ಮತ್ತು ಎಸ್‌ಬಿಐ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಯಿತು.ರಾಜ್ಯ ಸಂಘಟನಾ ಕಾರ್ಯದರ್ಶಿ ಕರಿಬಸಯ್ಯ ಬಸರೀಹಳ್ಳಿಮಠ, ಜಿಲ್ಲಾ ಘಟಕದ ಅಧ್ಯಕ್ಷ ಸತೀಶಗೌಡ ಮುದಿಗೌಡ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಶವಂತಗೌಡ ದೊಡ್ಡಗೌಡ್ರ, ಜಿಲ್ಲಾ ಸಹ ಕಾರ್ಯದರ್ಶಿ ಹಸನಸಾಬ ಹತ್ತಿಮತ್ತೂರ, ಹಾಲೇಶ ಹಾಲಣ್ಣನವರ, ಚನ್ನಪ್ಪ ಹೊನ್ನಮ್ಮನವರ, ಕುಮಾರ ರಾಮಾಪುರಮಠ, ಶೇಖಪ್ಪ ಫಕ್ರುದ್ದೀನ, ರೇವಣಸಿದ್ದಯ್ಯ ಅರಳಿಮಠ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT