ಹಿರೇಕೆರೂರ: ‘ಸಾಮೂಹಿಕ ವಿವಾಹಗಳಿಂದ ಬಡವರ ಆರ್ಥಿಕ ಹೊರೆ ಹಾಗೂ ವರದಕ್ಷಿಣೆ ಪಿಡುಗು ಕಡಿಮೆಯಾಗಲಿದೆ. ಎಲ್ಲರೂ ವರದಕ್ಷಿಣೆ ತಿರಸ್ಕರಿಸುವ ಗುಣ ಬೆಳಸಿಕೊಳ್ಳಬೇಕು’ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಪಟ್ಟಣದ ದುರ್ಗಾದೇವಿ ದೇವಸ್ಥಾನದಲ್ಲಿ ಭಾನುವಾರ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ತಾಲ್ಲೂಕಿನ ಅಂಬೇಡ್ಕರ್ ಸೇವಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಟ್ಟೀಹಳ್ಳಿಯ ಕಬ್ಬಿಣಕಂತಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಹಾಗೂ ತಿಪ್ಪಾಯಿಕೊಪ್ಪದ ಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಮಿತಿ ಅಧ್ಯಕ್ಷ ಭರಮಪ್ಪ ಹರಿಜನ ಅಧ್ಯಕ್ಷತೆ ವಹಿಸಿದ್ದರು. ಮಂಜುನಾಥ ತಂಬಾಕದ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಿವರಾಜ ಹರಿಜನ, ಸಮಾಜ ಸೇವಕ ಜಿ.ಪಿ. ಪ್ರಕಾಶ ಮಾತನಾಡಿದರು.

ಈ ವೇಳೆ ಮಾಜಿ ಶಾಸಕ ಬಿ.ಎಚ್. ಬನ್ನಿಕೋಡ, ಕರವೇ ಜಿಲ್ಲಾ ಅಧ್ಯಕ್ಷ ಗೀರಿಶ ಬಾರ್ಕಿ, ಸೇವಾ ಸಮಿತಿ ಕಾರ್ಯದರ್ಶಿ ಶಿವಾಜಪ್ಪ ದೊಡ್ಡಮನಿ, ಪ್ರಶಾಂತ ತಿರಕಪ್ಪನವರ, ಮಾಲತೇಶ ಬಿಲ್ಲಳ್ಳಿ, ಚನ್ನೇಶ ಬಾಲಣ್ಣನವರ, ಶಿಕ್ಷಕ ಪಿ.ನಾಗೇಂದ್ರ, ಮಹದೇವಪ್ಪ ಕರಿಯಣ್ಣನವರ, ಮಾಲತೇಶ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-22-1904337629

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.