ಹಿರೇಕೆರೂರ: ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ಆಡಳಿತ ವೈದ್ಯಾಧಿಕಾರಿ ಡಾ.ವಿನಯಕುಮಾರ ತಿಳಿಸಿದರು.

ತಾಲೂಕಿನ ಕೋಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ 14 ರಿಂದ 15 ವರ್ಷದ ಕಿಶೋರಿಯರಿಗೆ ಗರ್ಭಕಂಠದ ಕ್ಯಾನ್ಸರ್ ಬಾರದಂತೆ ಮುಂಜಾಗ್ರತಾ ಕ್ರಮವಾಗಿ ಎಚ್ಪಿವಿ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಹ್ಯೂಮನ್ ಪ್ಯಾಪಿಲೋಮ ವೈರಸ್ ಗರ್ಭಕಂಠ ಸೇರಿದಂತೆ ಅನೇಕ ಮಾದರಿಯ ಕ್ಯಾನ್ಸರ್ಗೆ ಕಾರಣವಾಗುತ್ತದೆ. ಲಸಿಕೆ ಹಾಕಿಸಿಕೊಳ್ಳುವುದರಿಂದ ಕ್ಯಾನ್ಸರ್ ಸೇರಿದಂತೆ ಇತರ ಗಂಭೀರ ಕಾಯಿಲೆಗಳು ಬರದಂತೆ ತಡೆಯಬಹುದು' ಎಂದು ಅವರು ಹೇಳಿದರು.

ಕೋಡ ಗ್ರಾಮಪಂಚಾಯತಿ ಮಾಜಿ ಅಧ್ಯಕ್ಷೆ ಶಿಲ್ಪಾ ತುಮರಿಕೊಪ್ಪ , ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ನಾಗರಾಜ ನರಸಾಪುರ ,ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಝಾಕೀರ್ ಹುಸೇನ್ , ವೈದ್ಯಾಧಿಕಾರಿ ಡಾ.ಅರ್ಬಾಜ್, ಅನುರಾಧ, ಶಾಂತಾ, ಗಂಗಮ್ಮ, ಸುನಿತಾ, ಗೀತಾ, ರುದ್ರಪ್ಪ, ಅರುಣ್ ಮತ್ತು ಇತರರು ಇದ್ದರು .

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-22-759735135

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.