ಹಿರೇಕೆರೂರ: ಅನಾಫೆಲಿಸ್ ಎನ್ನುವ ಹೆಣ್ಣು ಸೊಳ್ಳೆಯಿಂದ ಮಲೇರಿಯಾ ರೋಗ ಹರಡುತ್ತದೆ. ನಿಂತ ನೀರು ಸೊಳ್ಳೆಗಳ ತವರಿನಂತಿದ್ದು, ಸೋಳ್ಳೆಗಳ ಉತ್ಪತ್ತಿ ತಡೆಗಟ್ಟಿ, ಮಲೇರಿಯಾ ನಿರ್ಮೂಲನೆ ಪ್ರತಿಯೊಬ್ಬರ ಜವಾಬ್ದಾರಿ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಜೆಡ್ ಆರ್. ಮಕಾನದಾರ ಹೇಳಿದರು.

ಪಟ್ಟಣದ ಆರೋಗ್ಯಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಲೇರಿಯಾ ನಿಯಂತ್ರಣ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಲೇರಿಯಾವು ಕೆಲವೊಮ್ಮೆ ಮಾರಕವಾಗಬಹುದು. ಪ್ಲಾಸ್ಕೋಡಿಯಂ ಪರಾವಲಂಬಿಗಳು ಸಂಕೀರ್ಣ ಜೀವನ ಚಕ್ರವನ್ನು ಪಡೆದು, ಆವರ್ತಕ ಜ್ವರಗಳಿಗೆ ಕಾರಣವಾಗುತ್ತದೆ. ಹೆಚ್ಚಿನ ರೋಗಿಗಳು ಚಿಕಿತ್ಸೆಯ ನಂತರ ಮಲೇರಿಯಾ ಲಕ್ಷಣಗಳಿಂದ ಬೇಗ ಚೇತರಿಸಿಕೊಳ್ಳುತ್ತಾರೆ. ಆದರೆ, ಚಿಕಿತ್ಸೆ ವಿಳಂಬವಾದರೆ ತೀವ್ರ ರಕ್ತಹೀನತೆ, ಸೆರೆಬ್ರಲ್, ಕೋಮಾ ಅಥವಾ ಸಾವೂ ಸಂಭವವಿದೆ ಎಂದು ತಿಳಿಸಿದರು.

ಸಾರ್ವಜನಿಕ ಆಸ್ಪತ್ರೆ ವೈದ್ಯ ಡಾ. ಶಿವನಗೌಡ ಮಾತನಾಡಿ ಜ್ವರದ ಲಕ್ಷಣಗಳಿದ್ದರೆ ರಕ್ತ ಪರೀಕ್ಷೆ ಮಾಡಿಸಿ, ಸಂಪೂರ್ಣ ಚಿಕಿತ್ಸೆ ಪಡೆಯಿರಿ. ಮನೆಯ ಸುತ್ತ ಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಸೊಳ್ಳೆ ಪರದೆ ಬಳಸಿ ಎಂದರು.

ಜಿಲ್ಲಾ ಆರೋಗ್ಯ ನೀರಿಕ್ಷಣಾಧಿಕಾರಿ ರವಿ. ಕೆ.ಆರ್, ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಶಿವಪ್ರಸಾದ ಬಿ.ಎಸ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಬಿ.ಎಚ್.ದುಗ್ಗತ್ತಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ರಾಮಪ್ಪ ಆರ್. ಸದರಪ್ಪನವರ, ಆರೋಗ್ಯ ಮತ್ತು ಕ್ಷೇಮ ಕೇಂದ್ರ ನಮ್ಮ ಕ್ಲಿನಿಕ್ ಆರೋಗ್ಯ ಶಿಕ್ಷಣಾಧಿಕಾರಿ ಮಹಮ್ಮದ್ ಶೋಯಬ್, ರಾಮಚಂದ್ರಪ್ಪ, ಎಸ್ಟಿಎಸ್ ಷಣ್ಮುಖಪ್ಪ ಪಿ.ಬಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-22-1599385498

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.