ಹಿರೇಕೆರೂರ: ಹಿರೇಕೆರೂರ ಮತ್ತು ರಟ್ಟಿಹಳ್ಳಿ ತಾಲ್ಲೂಕುಗಳ ತಹಶೀಲ್ದಾರ್ ಕಚೇರಿಯಲ್ಲಿ ಆಧಾರ್ ಕಾರ್ಡ್ ನೊಂದಣಿ ಕೇಂದ್ರಗಳು ಇಲ್ಲದ ಕಾರಣ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ತುಂಬಾ ತೊಂದರೆ ಆಗುತ್ತಿದೆ. ಕೂಡಲೇ ಕೇಂದ್ರ ಆರಂಭಿಸಬೇಕು ಎಂದು ಅಖಿಲ ಕರ್ನಾಟಕ ರೈತ ಸಂಘದ ರಾಜ್ಯ ಅಧ್ಯಕ್ಷ ಹನುಮಂತಪ್ಪ ದೀವಗಿಹಳ್ಳಿ ಹೇಳಿದರು.

ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ಸೋಮವಾರ ತಾಲ್ಲೂಕಿನಾದ್ಯಂತ ಸಾರ್ವಜನಿಕರಿಗೆ ಆಗುತ್ತಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಅಖಿಲ ಕರ್ನಾಟಕ ರೈತ ಸಂಘದಿಂದ ತಾಲ್ಲೂಕಿನ ತಹಶೀಲ್ದಾರ್ ಎಂ.ರೇಣುಕಾಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.

ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಅಕಾಲಿಕ ಮಳೆಯಿಂದಾಗಿ ವಿವಿಧ ಬೆಳೆಗಳು ಹಾನಿಯಾಗಿವೆ. ಬೆಳೆ ಹಾನಿ ಪರಿಹಾರ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.

ಮಂಗಳೂರು ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರೋಗಿಗಳು ಹೋಗುವುದರಿಂದ ಪ್ರತಿ ದಿನ ಸಂಜೆ 6.30 ಕ್ಕೆ ಹಾವೇರಿಯಿಂದ ಬ್ಯಾಡಗಿ, ರಟ್ಟಿಹಳ್ಳಿ, ಮಾಸೂರು, ಶಿಕಾರಿಪುರ, ಶಿವಮೊಗ್ಗ ಮಾರ್ಗವಾಗಿ ಮಂಗಳೂರ ತಲುಪುವ ಮತ್ತು ರಾಣೆಬೆನ್ನೂರ ಡಿಪೋದಿಂದ ಹಲಗೇರಿ, ಕೋಡ, ಅಬಲೂರು, ಎತ್ತಿನಹಳ್ಳಿ, ಚಿಕ್ಕೇರೂರು, ಆನವಟ್ಟಿಯವರೆಗೆ ಹೀಗೆ ಹೊಸ ಮಾರ್ಗ ಪ್ರಾರಂಭಿಸಬೇಕು ಎಂದು ಅವರು ಹೇಳಿದರು.

ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರನ್ನು ಸೇರಿದಂತೆ ಎಲ್ಲ ಸಿಬ್ಬಂದಿ ಸರಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿಲ್ಲ. ಮಾಸಾಶನ, ವೃದ್ದಾಪ್ಯ ವೇತನ, ವಿಧವಾ ವೇತನ. ಅಂಗವಿಕಲರ ವೇತನ, ಮನಸ್ವಿನಿ, ಮೈತ್ರಿ, ಮುಂತಾದ ಯೋಜನೆಗಳು ಫಲಾನುಭವಿಗಳಿಗೆ ಸಕಾಲಕ್ಕೆ ದೊರೆಯುತ್ತಿಲ್ಲ. ಇದರ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಎಲ್ಲ ಬೇಡಿಕೆಗಳ ಬಗ್ಗೆ 15 ದಿನಗಳೊಳಗಾಗಿ ತಾಲ್ಲೂಕಿನ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಸಂಬಂಧ ಪಟ್ಟ ಅಧಿಕಾರಿಗಳ ಮತ್ತು ರೈತ ಮುಖಂಡರ ಸಭೆ ಕರೆಯಬೇಕು. ವಿಳಂಬ ಮಾಡಿದರೆ ಕಚೇರಿ ಎದುರು ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಅಖಿಲ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳಾದ ರಮೇಶ ಹ ಒಬಳೇರ, ಮಲ್ಲಮ್ಮ ಹುಲ್ಲಿನಕೊಪ್ಪ, ನಾಗರತ್ನ ಒಡೆನಾಯ್ಕರ್, ಶಿವಣ್ಣ ಜವನವರ, ಬಸವರಾಜ ಕೇಳಗಿನಮನಿ, ಕಾವ್ಯಾ ಹುಡೇದ್, ಗಂಗಮ್ಮ ಅಣ್ಣೆಣ್ಣನವರ, ಪೂಜಾ ಮ್ಯಾಚರ್ ಮತ್ತು ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-22-815386650

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.