ಹಿರೇಕೆರೂರ: ರಾಜ್ಯ ಸರ್ಕಾರ 2025- 26 ನೇ ಸಾಲಿನಲ್ಲಿ ಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲ್ಲೂಕಿಗೆ ಮೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ಮಂಜೂರು ಮಾಡಿದೆ. ಅದರಂತೆ ಪಟ್ಟಣದ ಸರ್ಕಾರಿ ಪ್ರೌಢಶಾಲೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಬದಲಾಗಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ನಡೆದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿಎಲ್ಲ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ಹಾಗೂ ಚಾಕೊಲೇಟ್ ನೀಡುವುದರ ಮೂಲಕ ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಿ ಅವರು ಮಾತನಾಡಿದರು.

ಈ ವರ್ಷ ಪ್ರವೇಶ ಪಡೆದ ಹೊಸ ವಿದ್ಯಾರ್ಥಿಗಳಿಗೆ ನಿವೃತ್ತ ಮುಖ್ಯ ಶಿಕ್ಷಕ ಜೆ ಬಿ ಮರಿಗೌಡ್ರು ಸುಮಾರು ₹12 ಸಾವಿರ ವೆಚ್ಚದಲ್ಲಿ ನೋಟ್ ಬುಕ್ ಗಳನ್ನು ವಿತರಿಸಿದ್ದು ಅವರಿಗೆ ಅಭಿನಂದನೆಗಳು ಎಂದು ಹೇಳಿದರು. ಪ್ರಸಕ್ತ ವರ್ಷದಿಂದಲೇ ಶಾಲೆಯಲ್ಲಿ ಎಂಟನೇ ತರಗತಿ ಇಂಗ್ಲಿಷ್ ಮಾಧ್ಯಮವನ್ನು ಕೂಡ ಪ್ರಾರಂಭಿಸಲಾಗುವುದು. ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಎನ್. ಸುರೇಶಕುಮಾರ ವಹಿಸಿಕೊಂಡಿದ್ದರು. ಶಾಲೆಯ ಶಿಕ್ಷಕ ಮೇಘರಾಜ ಮಾಳಗಿಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಹಾವೇರಿ ಕೆ.ಎಂ.ಎಫ್ ಉಪಾಧ್ಯಕ್ಷ ಉಜ್ಜನಗೌಡ ಮಾವಿನತೋಪ, ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಶ್ರೀಧರ್, ಕ್ಷೇತ್ರ ಸಮನ್ವಯಾಧಿಕಾರಿ ಬಿ.ಆರ್. ತೇವರಿ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಮಹೇಂದ್ರ ಬಡಳ್ಳಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಿವರಾಜ ಹರಿಜನ, ನಿವೃತ್ತ ಮುಖ್ಯ ಶಿಕ್ಷಕ ಜೆ.ಬಿ. ಮರಿಗೌಡರ , ಎಂ.ಕೆ.ಬಿ ಶಾಲೆಯ ಪ್ರಧಾನ ಶಿಕ್ಷಕಿ ಜಯಮ್ಮ, ಎಸ್.ಆರ್. ಅಣ್ಣಯ್ಯ , ಎಂ.ವೈ. ದಾಳಿ, ನೂರ್ಜಾನ್, ಪ್ರಕಾಶ ಹಿತ್ಲಳ್ಳಿ , ಬಸನಗೌಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-22-303719453

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.