ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ಶರಣ ಸಂಸ್ಕೃತಿ ಉತ್ಸವ 14ರಿಂದ

Published 12 ಜನವರಿ 2024, 7:27 IST
Last Updated 12 ಜನವರಿ 2024, 7:27 IST
ಅಕ್ಷರ ಗಾತ್ರ

ಹಾವೇರಿ: ತಾಲ್ಲೂಕಿನ ನರಸೀಪುರದ ನಿಜಶರಣ ಅಂಬಿಗರಚೌಡಯ್ಯನವರ ಗುರುಪೀಠದಲ್ಲಿ ಜ.14 ಮತ್ತು 15 ರಂದು ಶರಣ ಸಂಸ್ಕೃತಿ ಉತ್ಸವ, ವಚನ ಗ್ರಂಥ ಮಹಾರಥೋತ್ಸವ, ಅಂಬಿಗರಚೌಡಯ್ಯನವರ 904ನೇ ಜಯಂತ್ಯುತ್ಸವ ಹಾಗೂ ಲಿಂ.ಶಾಂತಮುನಿ ಸ್ವಾಮೀಜಿ 8ನೇ ಸ್ಮರಣೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಗುರುಪೀಠದ ಶಾಂತಭೀಷ್ಮಚೌಡಯ್ಯ ಸ್ವಾಮೀಜಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.15ರಂದು ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಶಾಸಕ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ರಾಜಕೀಯ ಮುಖಂಡರು, ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.

ಜ.15ರಂದು ಬೆಳಿಗ್ಗೆ 6ಕ್ಕೆ ಮಹಿಳೆಯರಿಂದ ತೊಟ್ಟಿಲೋತ್ಸವ, 8 ಗಂಟೆಗೆ ನಿಜಶರಣ ಅಂಬಿಗರಚೌಡಯ್ಯನವರ ಗದ್ದುಗೆಗೆ ಪೂಜೆ, 11 ಗಂಟೆಗೆ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಮಧ್ಯಾಹ್ನ 1.30ಕ್ಕೆ ನಿಜಶರಣ ಅಂಬಿಗರಚೌಡಯ್ಯನವರ ವಚನ ಕಂಠಪಾಠ ಸ್ಪರ್ಧೆ ಆಯೋಜಿಸಲಾಗಿದೆ. ಸಂಜೆ 5.30ಕ್ಕೆ ಸಾಂಸ್ಕೃತಿಕ ಮತ್ತು ಜಾನಪದ ಕಲಾ ಮಹೋತ್ಸವದ ಕಾರ್ಯಕ್ರಮವನ್ನು ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಲಿದ್ದಾರೆ.

ಶಾಸಕ ಪ್ರಕಾಶ ಕೋಳಿವಾಡ ಅಧ್ಯಕ್ಷತೆ ವಹಿಸಲಿದ್ದಾರೆ. ಸೀಮಿಕೇರಿ ರಾಮಾರೂಢಮಠದ ಪರಮರಾಮಾರೂಢ ಸ್ವಾಮೀಜಿ, ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಸೇರಿದಂತೆ ನಾಡಿನ ವಿವಿಧ ಮಠಾಧೀಶರು ಸಾನ್ನಿಧ್ಯ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಸಚಿವರು, ಶಾಸಕರು, ಗಣ್ಯರು ಪಾಲ್ಗೊಳ್ಳಲಿದ್ದಾರೆ. ಸಂಜೆ 5.30ಕ್ಕೆ ನಿಜಶರಣ ಅಂಬಿಗರಚೌಡಯ್ಯನವರ ಸಾಂಸ್ಕೃತಿಕ ಉತ್ಸವ, ರಸಮಂಜರಿ ಕಾರ್ಯಕ್ರಮ ಹಾಗೂ ರಕ್ತಕ್ರಾಂತಿ ಎಂಬ ಪೌರಾಣಿಕ ನಾಟಕ ಪ್ರದರ್ಶನ ನಡೆಯಲಿದೆ ಎಂದರು.

ಗಂಗಾಮತ ಸಮಾಜದ ಪ್ರಮುಖರಾದ ಮಂಜುನಾಥ ಭೋವಿ, ಬಸವರಾಜ ಸಪ್ಪನಗೌಡ್ರ, ಪ್ರವೀಣ ವಡ್ನಿಕೊಪ್ಪ, ಶಂಕರ ಸುತಾರ, ಎಚ್.ಎನ್.ದಂಡಿನ್, ಎಸ್.ಎನ್.ಮೇಡ್ಲೇರಿ, ಶಿವಣ್ಣ ಗಬ್ಬೇರ, ನಾಗಣ್ಣ ಶೇಷಗಿರಿ, ಕರಬಸಪ್ಪ ಹಳದೂರ, ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT