ಗುರುವಾರ , ಜೂನ್ 17, 2021
27 °C

ಮನೆ ಹಾನಿ: ಪರಿಹಾರಕ್ಕೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಕಳೆದ ವರ್ಷ ನೆರೆ ಮತ್ತು ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಸಾವಿರಾರು ಮನೆಗಳು ಹಾನಿಯಾಗಿವೆ. ಆದರೆ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡುವಲ್ಲಿ ಅಧಿಕಾರಿ ವಿಳಂಬ ಮಾಡುತ್ತಿದ್ದಾರೆ. ಕೂಡಲೇ ಅರ್ಹ ಫಲಾನುಭವಿಗಳಿಗೆ ಪರಿಹಾರ ನೀಡಬೇಕು ಎಂದು ಜಯಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಮನವಿ ಮಾಡಿದರು.    

ಸವಣೂರ ಪಟ್ಟಣದಲ್ಲಿ ಹಾನಿಯಾದ 89 ಮನೆಗಳನ್ನು ಗುರುತಿಸಿ, ನಂತರ ಅವುಗಳನ್ನು ಬ್ಲಾಕ್‌ ಪಟ್ಟಿಯಲ್ಲಿ ಸೇರಿಸಲಾಗಿತ್ತು. ಸಂಘಟನೆ ಮನವಿ ಮೇರೆಗೆ ಅನ್‌ಬ್ಲಾಕ್‌ ಮಾಡಲಾಗಿದೆ. ಮೊದಲೇ ಹಂತದ ಸಹಾಯಧನವನ್ನು ಸರ್ಕಾರ ನೀಡಿದ್ದು, ಕಳೆದ ತಿಂಗಳಿನಲ್ಲಿ ಎರಡನೇ ಕಂತನ್ನು ಖಾತೆಗಳಿಗೆ ಜಮಾ ಮಾಡಿ, ಮಾರನೇ ದಿನ ವಾಪಸ್‌ ತೆಗೆದುಕೊಳ್ಳಲಾಗಿದೆ. ಮತ್ತೆ ಸಹಾಯಧನ ನೀಡಿರುವುದಿಲ್ಲ ಎಂದು ಆರೋಪಿಸಿದ್ದಾರೆ. 

ಅಧಿಕಾರಿಗಳು ಕೂಡಲೇ ಜನರಿಗೆ ಸ್ಪಂದಿಸಬೇಕು. ಜನಸಾಮಾನ್ಯರನ್ನು ಕಚೇರಿಗಳಿಗೆ ಅಲೆದಾಡಿಸಬಾರದು. ಅರ್ಹರಿಗೆ ಪರಿಹಾರ ನೀಡದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. 

ರಮೇಶ ಆನವಟ್ಟಿ, ಜಿಲ್ಲಾ ಘಟಕದ ಅಧ್ಯಕ್ಷ ಸುಭಾಸ ಬೆಂಗಳೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಮುಗದೂರ, ಜಿಲ್ಲಾ ಕಾರ್ಯಾಧ್ಯಕ್ಷ ರಮೇಶ ಜಾಲಿಹಾಳ ಇದ್ದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.