ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗೃಹರಕ್ಷಕರ ಸೇವೆ ಶ್ಲಾಘನೀಯ’

Last Updated 24 ನವೆಂಬರ್ 2021, 16:15 IST
ಅಕ್ಷರ ಗಾತ್ರ

ಹಾವೇರಿ: ‘ಸಮಾಜದಲ್ಲಿ ಶಾಂತಿ ಸ್ಥಾಪನೆ, ಕಾನೂನು ರಕ್ಷಣೆ, ನಾಗರಿಕ ನೆಮ್ಮದಿಗೆ ಗೃಹರಕ್ಷಕರ ಸೇವೆ ಜನ ಸಾಮಾನ್ಯರ ಮೆಚ್ಚುಗೆಗೆ ಪಾತ್ರವಾಗಿದೆ’ ಎಂದು ಗೃಹರಕ್ಷಕ ದಳದ ಜಿಲ್ಲಾ ಸಮಾದೇಷ್ಟರು ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಸಂತೋಷ ಹೇಳಿದರು.

ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಗೃಹರಕ್ಷಕರ ವೃತ್ತಿಪರ ಹಾಗೂ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಶಿಸ್ತಿನ ಸಿಪಾಯಿಯಂತೆ ಕರ್ತವ್ಯಗಳನ್ನು ನಿರ್ವಹಿಸಬೇಕು. ಇದರಿಂದ ಎಲ್ಲ ಗೃಹರಕ್ಷಕರಿಗೆ ಇನ್ನೂ ಹೆಚ್ಚಿನ ಕರ್ತವ್ಯಗಳು ಮತ್ತು ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುತ್ತದೆ ಎಂದರು.

ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪಿ.ಆರ್.ಹಾವನೂರ, ‘ಸಮಾಜದಲ್ಲಿ ಯಾವುದೇ ಪ್ರತಿಫಲವನ್ನು ಅಪೇಕ್ಷಿಸದೇ ನಿಸ್ವಾರ್ಥ ಸೇವೆ ನಿರ್ವಹಿಸುತ್ತಿರುವ ಗೃಹರಕ್ಷಕದಳದ ಕಾರ್ಯ ಶ್ಲಾಘನೀಯ’ ಎಂದು ಬಣ್ಣಿಸಿದರು.

ಗೃಹರಕ್ಷಕದಳ ಇಲಾಖೆ 1962ರಲ್ಲಿ ಉದಯವಾಗಿ ಇಂದಿನವರೆಗೂ ಪೊಲೀಸ್ ಇಲಾಖೆಯೊಂದಿಗೆ ಸೇರಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಕೋವಿಡ್-19 ಸಮಯದಲ್ಲಿ ಗೃಹರಕ್ಷಕರು ಉತ್ತಮ ಸೇವೆ ಸಲ್ಲಿಸಿದ್ದಾರೆ. ಜಿಲ್ಲಾ ಕಾರಾಗೃಹ, ಜಿಲ್ಲಾ ಆಡಳಿತ ಭವನ, ಪ್ರಾದೇಶಿಕ ಸಾರಿಗೆ ಕಚೇರಿ, ಮರಳು ಗಣಿಗಾರಿಕೆ ಮತ್ತು ನ್ಯಾಯಾಲಯಗಳಲ್ಲಿ ಸಹ ಗೃಹರಕ್ಷಕರು ಉತ್ತಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು.

ಕ್ರೀಡಾಕೂಟದಲ್ಲಿ ಭಾಗವಹಿಸಿದ ಗೃಹರಕ್ಷಕರಿಗೆ ಕ್ರೀಡಾಕೂಟದ ಪ್ರಮಾಣ ವಚನ ಬೋಧಿಸಲಾಯಿತು ಹಾಗೂ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಗೃಹರಕ್ಷಕದಳ ಬ್ಯಾಡಗಿ ಘಟಕದ ಘಟಕಾಧಿಕಾರಿ ಎಂ.ಟಿ. ನಾಯಕ್, ಅಕ್ಕಿಆಲೂರ ಘಟಕಾಧಿಕಾರಿ ಸಿ.ಎಸ್. ಬೆಲ್ಲದ, ಎಲ್ಲಾ ಘಟಕದ ಘಟಕಾಧಿಕಾರಿಗಳು ಹಾಗೂ ಗೃಹರಕ್ಷಕರು, ಗೃಹರಕ್ಷಕಿಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT