ಹಾವೇರಿ: ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಆವರಣದಲ್ಲಿರುವ ‘ಹಿರೇತಿಟ್ಟು’ ಬಯಲು ರಂಗಮಂದಿರದಲ್ಲಿಡಿಸೆಂಬರ್ 1ರಂದು 6 ಮತ್ತು 7ನೇ ಘಟಿಕೋತ್ಸವ ನಡೆಯಲಿದ್ದು, ಈ ಬಾರಿ ಆರು ಸಾಧಕರಿಗೆ ‘ಗೌರವ ಡಾಕ್ಟರೇಟ್’ ಪದವಿ ನೀಡಲಾಗುವುದು ಎಂದು ಕುಲಪತಿ ಪ್ರೊ.ಟಿ.ಎಂ. ಭಾಸ್ಕರ್ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ರಾಣೆಬೆನ್ನೂರಿನ ಅರೆಮಲ್ಲಾಪುರದ ಜಾನಪದ ಕಲಾವಿದ ಕೆಂಚಪ್ಪ ನಾಗರಜ್ಜಿ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಜೀವನ್ ರಾಂ ಸುಳ್ಯ, ಉಡುಪಿ ಜಿಲ್ಲೆಯ ಯಕ್ಷಗಾನ ಕಲಾವಿದ ತಲ್ಲೂರು ಶಿವರಾಮ ಶೆಟ್ಟಿ, ಹುಬ್ಬಳ್ಳಿಯ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ, ಗದಗ ಜಿಲ್ಲೆಯ ಗಂಗಿಮಡಿನಗರದ ಬಸವರಾಜು ಕಂಚಿಗೇರಿ, ಬಾಗಲಕೋಟೆ ಜಿಲ್ಲೆಯ ವೆಂಕಪ್ಪ ಅಂಬಾಜಿ ಸುಗೇತಕರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪದವಿ ಪ್ರದಾನ ಮಾಡಲಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ‘ಘಟಿಕೋತ್ಸವ ಭಾಷಣ’ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಪಾಲ್ಗೊಳ್ಳಲಿದ್ದಾರೆ ಎಂದರು.

2020ನೇ ಸಾಲಿನ ಇಬ್ಬರು ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಮತ್ತು 2021ನೇ ಸಾಲಿನ ಮೂವರು ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಲಾಗುವುದು. 26 ರ್ಯಾಂಕ್ ವಿದ್ಯಾರ್ಥಿಗಳು, ಪಿಎಚ್ಡಿ ಪದವಿ ಪಡೆದ 7 ಮಂದಿ ಸೇರಿದಂತೆ ಒಟ್ಟು 515 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.