ಶುಕ್ರವಾರ, ಅಕ್ಟೋಬರ್ 23, 2020
21 °C

ನನಗೂ ಸಂಪುಟದಲ್ಲಿ ಅವಕಾಶ ಸಿಗಲಿದೆ: ಶಾಸಕ ನೆಹರು ಓಲೇಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್‌ ರಚನೆಯಾದರೆ ನನಗೂ ಅವಕಾಶ ಸಿಗಲಿದೆ ಎಂದು ಶಾಸಕ ನೆಹರು ಓಲೇಕಾರ ವಿಶ್ವಾಸ ವ್ಯಕ್ತಪಡಿಸಿದರು. 

ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಪರಿಶಿಷ್ಟ ಜಾತಿಯ ಬಲಗೈ ಸಮಾಜದ ಶಾಸಕ. ಮೂರನೇ ಬಾರಿ ಆಯ್ಕೆ ಆಗಿದ್ದೇನೆ. ಈ ಬಾರಿ ಅವಕಾಶ ಮಾಡಿಕೊಡುತ್ತಾರೆ ಎಂಬ ವಿಶ್ವಾಸವಿದೆ. ಸಂಪುಟದಲ್ಲಿ ಕೆಲಸ‌ ಮಾಡದೇ ಇರುವ ಸಚಿವರು ಇದ್ದಾರೆ. ಅಂಥವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕು ಎಂದು ಹೇಳಿದರು. 

ಜಿಲ್ಲೆಯಲ್ಲಿ ಯಾರನ್ನು ಕೈ ಬಿಡಬೇಕು ಎಂಬುದು ಹೈಕಮಾಂಡ್‌ಗೆ ಗೊತ್ತಿದೆ. ಹೊಸಬರಿಗೆ ಅವಕಾಶ ನೀಡಿದರೆ ಉಳಿದ ಎರಡೂವರೆ ವರ್ಷದಲ್ಲಿ ಸುಸೂತ್ರವಾಗಿ ಸರ್ಕಾರ ನಡೆಸಲು ಸಾಧ್ಯವಾಗುತ್ತದೆ ಎಂದು ಮಾರ್ಮಿಕವಾಗಿ ನುಡಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು