ಶನಿವಾರ, ಸೆಪ್ಟೆಂಬರ್ 18, 2021
27 °C

ಕೃಷಿ ಖಾತೆಯನ್ನು ಖುಷಿಯಿಂದ ನಿರ್ವಹಿಸುತ್ತೇನೆ: ಸಚಿವ ಬಿ.ಸಿ. ಪಾಟೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ‘ನಾನು ಗೃಹ ಖಾತೆ ಕೇಳಿರಲಿಲ್ಲ. ಕೃಷಿ ಖಾತೆಯನ್ನು ಖುಷಿಯಿಂದ ನಿರ್ವಹಿಸುತ್ತೇನೆ ಎಂದು ಹೇಳಿದ್ದೆ. ಈಗ ಕೃಷಿ ಖಾತೆಯನ್ನೇ ಕೊಟ್ಟಿದ್ದಾರೆ. ಒಂದು ವರ್ಷ ನಾಲ್ಕು ತಿಂಗಳಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಿಕೊಂಡು ಹೋಗುತ್ತೇನೆ’ ಎಂದು ಸಚಿವ ಬಿ.ಸಿ.ಪಾಟೀಲ ಹೇಳಿದರು. 

ಶನಿವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಕೃಷಿ ಇಲಾಖೆ ಯಾವಾಗಲೂ ಮುಳ್ಳಿನ ಹಾಸಿಗೆ ಎಂದು ನನಗೆ ಗೊತ್ತಿದೆ. ನಾನು ರೈತನ ಮಗನಾಗಿ ರೈತನ ಕಣ್ಣೀರು ಒರೆಸುವ ಕೆಲಸ ಮಾಡದೆ ಓಡಿ ಹೋದರೆ ರೈತರನ್ನು ನೋಡಿಕೊಳ್ಳುವವರು ಯಾರು. ಏನೇ ಸಮಸ್ಯೆಗಳು ಬಂದರೂ ಪರಿಹರಿಸುವ ಕಾರ್ಯ ಮಾಡುತ್ತೇನೆ ಎಂದರು. 

ಮೂರು ವರ್ಷಗಳಿಂದ ಅತಿವೃಷ್ಟಿ ಮತ್ತು ನೆರೆ ಹಾವಳಿ ಉಂಟಾಗುತ್ತಿದೆ. ಈ ಬಾರಿ ಹಾನಿಯಾಗಿರುವ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಸಮೀಕ್ಷೆ ನಡೆಸಿ, ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು. 

ಕೃಷಿ ಅವಲಂಬಿಸಿದ ಯುವಕರಿಗೆ ಹೆಣ್ಣು ಕೊಡುತ್ತಿಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ, ‘ಯುವಕರು ಪ್ರಗತಿಪರ ಕೃಷಿ ಪದ್ಧತಿ ಅಳವಡಿಸಿಕೊಂಡರೆ ಮಣ್ಣಿನಲ್ಲಿ ಬಂಗಾರ ಬೆಳೆಯಬಹುದು. ನಾನು ಇದನ್ನು ನಾಡಿನಾದ್ಯಂತ ಸಂಚರಿಸಿ ಅರ್ಥ ಮಾಡಿಕೊಂಡಿದ್ದೇನೆ. ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಪ್ರಗತಿ ಸಾಧಿಸಿದರೆ, ಹುಡುಕಿಕೊಂಡು ಬಂದು ಹೆಣ್ಣನ್ನು ಕೊಡುತ್ತಾರೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು