ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಪೌಷ್ಟಿಕ ಮಕ್ಕಳನ್ನು ಗುರುತಿಸಿ;ಚಿಕಿತ್ಸೆ ನೀಡಿ’

ರಾಷ್ಟ್ರೀಯ ಪೋಷಣಾ ಮಾಸಾಚರಣೆ ರಥಕ್ಕೆ ಚಾಲನೆ
Last Updated 14 ಸೆಪ್ಟೆಂಬರ್ 2020, 12:38 IST
ಅಕ್ಷರ ಗಾತ್ರ

ರಾಣೆಬೆನ್ನೂರು: ‘ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳನ್ನು ಗುರುತಿಸಿ, ಅಂತಹ ಮಕ್ಕಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಹಾಗೂ ಪೌಷ್ಟಿಕ ಆಹಾರ ವಿತರಿಸಿ ಅಪೌಷ್ಟಿಕ ಮುಕ್ತ ಗ್ರಾಮಗಳಾಗಿ ಘೋಷಿಸಲು ಅಂದೋಲನದ ರೀತಿಯಲ್ಲಿ ಕೆಲಸಮಾಡಬೇಕು’ ಎಂದು ಶಾಸಕ ಅರುಣಕುಮಾರ ಪೂಜಾರ ಹೇಳಿದರು.

ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ತಾಲ್ಲೂಕು ಪಂಚಾಯಿತಿ ಮತ್ತು ಆಶ್ರಯದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಪೋಷಣ ಮಾಸಾಚರಣೆ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜಯಶ್ರೀ ಪಾಟೀಲ ಮಾತನಾಡಿ, ಅಪೌಷ್ಟಿಕ ಮಕ್ಕಳನ್ನು ಗುರುತಿಸಿ ಸೂಕ್ತ ಚಿಕಿತ್ಸೆ ನೀಡುವುದು ರಾಷ್ಟ್ರೀಯ ಪೋಷಣ ಕಾರ್ಯಕ್ರಮದ ಉದ್ದೇಶವಾಗಿದೆ. ಜಾಗೃತಿ ರಥ ತಾಲ್ಲೂಕಿನ ಎಲ್ಲ ಗ್ರಾಮಗಳಿಗೆ ಭೇಟಿ ನೀಡಲಿದೆ ಎಂದರು.

ಜಿಲ್ಲಾ ಪಂಚಾಯ್ತಿ ಸದಸ್ಯೆ ಗದಿಗೆವ್ವ ದೇಸಾಯಿ ಅವರು ರಥಕ್ಕೆ ಹಸಿರು ನಿಶಾನೆ ತೋರಿದರು.

ಜಿಲ್ಲಾ ಪಂಚಾಯ್ತಿ ಸದಸ್ಯೆ ಮಂಗಳಗೌರಿ ಪೂಜಾರ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಗೀತಾ ವಸಂತ ಲಮಾಣಿ, ಉಪಾಧ್ಯಕ್ಷೆ ಕಸ್ತೂರವ್ವ ಹೊನ್ನಾಳಿ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚೋಳಪ್ಪ ಕಸವಾಳ, ತಹಶೀಲ್ದಾರ್ ಬಸನಗೌಡ ಕೊಟೂರ, ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಂ.ಕಾಂಬಳೆ, ಸಾಕ್ಷರತಾ ಅಧಿಕಾರಿ ಸುರೇಶ ಕರೂರ, ಪದಕಿ, ಬಸವರಾಜ ಶಿಡೇನೂರ, ಶೋಭಾ ಹುಲ್ಮನಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮಹಿಳಾ ಮೇಲ್ವಿಚಾರಕಿಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT