ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ: ಆನಂದಸ್ವಾಮಿ

Published 24 ಮಾರ್ಚ್ 2024, 15:45 IST
Last Updated 24 ಮಾರ್ಚ್ 2024, 15:45 IST
ಅಕ್ಷರ ಗಾತ್ರ

ಬ್ಯಾಡಗಿ: ಕಳೆದ ವಿದಾನಸಭಾ ಚುನಾವಣೆಯಲ್ಲಿ ಕೊಟ್ಟಿದ್ದ ಐದೂ ಭರಸೆಗಳನ್ನು ಈಡೇರಿಸುವ ಮೂಲಕ ಕಾಂಗ್ರೆಸ್‌ ನುಡಿದಂತೆ ನಡೆದಿದೆ ಎಂದು ಹಾವೇರಿ– ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.

ತಾಲ್ಲೂಕಿನ ಕದರಮಂಡಲಗಿ, ಬಿಸಲಹಳ್ಳಿ, ಶಿಡೇನೂರ, ಕೆರವಡಿ ಹಾಗೂ ಮೋಟೆಬೆನ್ನೂರು ಗ್ರಾಮಗಳಲ್ಲಿ ಭಾನುವಾರ ಏರ್ಪಡಿಸಿದ್ದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

‘ಸುಳ್ಳು ಭರವಸೆ ನೀಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಕಿತ್ತೊಗೆಯಲು ಕಾಂಗ್ರೆಸ್‌ ಪಕ್ಷದ ಸಾಧನೆಯನ್ನು ಜನರಿಗೆ ತಲುಪಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಕೆಲಸ ಮಾಡಬೇಕು’ ಎಂದು ಮನವಿ ಮಾಡಿಕೊಂಡರು.

ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಬಸವರಾಜ ಶಿವಣ್ನಣವರ ಮಾತನಾಡಿ, ‘ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಡಾ.ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ವೇಳೆ ದೇಶದ ರೈತರ ₹ 72 ಸಾವಿರ ಕೋಟಿ ಸಾಲವನ್ನು ಮನ್ನಾ ಮಾಡಿದೆ. ಮತ್ತೆ ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಲು ಬದ್ಧವಾಗಿದೆ. ಲೋಕಸಭಾ ಚುನಾವಣೆಯ ಬಳಿಕ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎನ್ನುವ ವಿರೋಧ ಪಕ್ಷಗಳ ಹೇಳಿಕೆಯನ್ನು ನಂಬಬಾರದು’ ಎಂದು ಅವರು ಹೇಳಿದರು.

‘ರಾಜ್ಯ ಹಿಂದೆಂದೂ ಕಾಣದಂತಹ ಬರ ಪರಿಸ್ಥಿತಿ ಎದುರಿಸುತ್ತಿದೆ. ಆದರೆ ರಾಜ್ಯಕ್ಕೆ ಬರಬೇಕಾದ ಪರಿಹಾರದ ನಯಾ ಪೈಸೆ ಹಣವೂ ಸಂದಾಯವಾಗಿಲ್ಲ’ ಎಂದು ಆರೋಪಿಸಿದರು. 

‌ಮುಖಂಡರಾದ ಸೋಮಣ್ಣ ಬೇವಿನಮರದ, ಚನ್ನಬಸಪ್ಪ ಹುಲ್ಲತ್ತಿ, ದಾನಪ್ಪ ಚೂರಿ, ಪಿ.ಸಿ.ಶಿಗಿಹಳ್ಳಿ, ಮಾಲತೇಶ ದೊಡ್ಡಮನಿ, ದುರ್ಗೇಶ ಗೋಣೆಮ್ಮನವರ, ಖಾದರಸಾಬ ದೊಡ್ಡಮನಿ, ಶಂಭಣ್ಣ ಯಲಿಗಾರ, ಶಂಕರಗೌಡ ಪಾಟೀಲ, ರಾಜೆಸಾಬ ಕಳ್ಯಾಳ, ಲಕ್ಷ್ಮೀ ಜಿಂಗಾಡೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT