ಸೋಮವಾರ, ಜನವರಿ 25, 2021
16 °C
ತುಂಗಭದ್ರಾ ನದಿ ವ್ಯಾಪ್ತಿಯಲ್ಲಿ ಅಕ್ರಮ ದಾಸ್ತಾನು: ಅಧಿಕಾರಿಗಳ ದಾಳಿ

ತುಂಗಭದ್ರಾ ನದಿ ವ್ಯಾಪ್ತಿಯಲ್ಲಿ ಅಕ್ರಮ ದಾಸ್ತಾನು: 210 ಮೆಟ್ರಿಕ್ ಟನ್ ಮರಳು ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ರಾಣೆಬೆನ್ನೂರು ತಾಲ್ಲೂಕಿನ ಉದಗಟ್ಟಿ ಗ್ರಾಮದ ತುಂಗಭದ್ರಾ ನದಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ದಾಸ್ತಾನು ಮಾಡಿದ್ದ 210 ಮೆಟ್ರಿಕ್ ಟನ್ ಮರಳನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆ ನೇತೃತ್ವದಲ್ಲಿ ವಿವಿಧ ಅಧಿಕಾರಿಗಳ ತಂಡ ದಾಳಿ ನಡೆಸಿ ವಶಪಡಿಸಿಕೊಂಡಿದೆ.

ಅನಧಿಕೃತವಾಗಿ ಮರಳು ಗಣಿಗಾರಿಕೆ ಹಾಗೂ ಸಾಗಾಣಿಕೆ ಮಾಡುತ್ತಿರುವ ದೂರಿನ ಹಿನ್ನೆಲೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಭೂ ವಿಜ್ಞಾನಿ ಪುಷ್ಪಾವತಿ ಕೆ.ಎನ್. ಹಾಗೂ ಭೂವಿಜ್ಞಾನಿ ಶ್ರೀನಿವಾಸ ಅವರು ಮಂಗಳವಾರ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಸದಾನಂದ, ಗ್ರಾಮ ಲೆಕ್ಕಾಧಿಕಾರಿ ಎಸ್.ಎನ್. ಸುರೇಶ, ಪೊಲೀಸ್ ಸಿಬ್ಬಂದಿ ಎಸ್.ಎನ್.ಮೆಡ್ಲೇರಿ ಅವರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಅನಧಿಕೃತವಾಗಿ ದಾಸ್ತಾನು ಮಾಡಲಾದ ಮರಳನ್ನು ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಳ್ಳಲಾದ ಮರಳನ್ನು ಹಾವೇರಿ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ತೀರ್ಮಾನದಂತೆ ರಾಜಧನ ಪಾವತಿಸಿಕೊಂಡು ಸರ್ಕಾರಿ ಕಾಮಗಾರಿಗೆ ವಿಲೇವಾರಿ ಮಾಡಲು ತೀರ್ಮಾನಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಭೂ ವಿಜ್ಞಾನಿ ಪುಷ್ಪಾವತಿ ಕೆ.ಎನ್. ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.