ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಕ್ರಮ ಸಾಗಣೆ: 238 ಕ್ವಿಂಟಲ್‌ ಪಡಿತರ ಅಕ್ಕಿ ವಶ

Published 24 ಮೇ 2024, 15:43 IST
Last Updated 24 ಮೇ 2024, 15:43 IST
ಅಕ್ಷರ ಗಾತ್ರ

ಹಾವೇರಿ: ಸಾರ್ವಜನಿಕರ ಪ‍ಡಿತರ ಅಕ್ಕಿಯನ್ನು ಲಾರಿಯಲ್ಲಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಸಂದರ್ಭ ಶಿಗ್ಗಾವಿ ತಾಲ್ಲೂಕಿನ ಬಂಕಾಪುರ ಟೋಲ್‌ ಹತ್ತಿರ ಆಹಾರ ನಿರೀಕ್ಷಕರು ಮತ್ತು ಪೊಲೀಸರು ಶುಕ್ರವಾರ ದಾಳಿ ನಡೆಸಿ, 238 ಕ್ವಿಂಟಲ್‌ ಅಕ್ಕಿ ಹಾಗೂ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. 

ಶುಕ್ರವಾರ ಮಧ್ಯಾಹ್ನ 12.30ರ ವೇಳೆಯಲ್ಲಿ ಹುಬ್ಬಳ್ಳಿಯಿಂದ ರಾಷ್ಟ್ರೀಯ ಹೆದ್ದಾರಿ –48ರ ಮೂಲಕ ಬೆಂಗಳೂರು ಕಡೆ ಅಕ್ಕಿಯನ್ನು ಸಾಗಿಸುತ್ತಿದ್ದ ಸಂದರ್ಭ ಖಚಿತ ಮಾಹಿತಿ ಮೇರೆಗೆ ₹8.11 ಲಕ್ಷ ಮೌಲ್ಯದ 478 ಅಕ್ಕಿ ಚೀಲಗಳನ್ನು ವಶಕ್ಕೆ ಪಡೆಯಲಾಗಿದೆ. 

ಡಿ.ಸಿ.ಆರ್‌.ಬಿಯ ಪಿಎಸ್‌ಐ ಕೃಷ್ಣಪ್ಪ ತೋಪಿನ ಮತ್ತು ಸಿಬ್ಬಂದಿಗಳಾದ ಜಿ.ಬಿ.ಕಾಳೆ, ಪ್ರಕಾಶ ದೇವಗಿರಿ, ಬೀರಪ್ಪ ಲಮಾಣಿ ಹಾಗೂ ಶಿಗ್ಗಾವಿ ಆಹಾರ ನಿರೀಕ್ಷಕರನ್ನು ಒಳಗೊಂಡ ತಂಡವು ಜಂಟಿ ಕಾರ್ಯಾಚರಣೆ ನಡೆಸಿ ಲಾರಿ ಚಾಲಕನನ್ನು ಬಂಧಿಸಿದೆ. ಬಂಕಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಕ್ರಮ ಸಾಗಣೆ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಂಶುಕುಮಾರ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT