ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಕ್ರಮ ಗರ್ಭಕೋಶ: ಸಿ.ಎಂ ವಾಹನ ಅಡ್ಡಗಟ್ಟಲು ಸಿದ್ದವಾಗಿದ್ದ ಪ್ರತಿಭಟನಕಾರರು ವಶಕ್ಕೆ

Published : 30 ಆಗಸ್ಟ್ 2024, 9:39 IST
Last Updated : 30 ಆಗಸ್ಟ್ 2024, 9:39 IST
ಫಾಲೋ ಮಾಡಿ
Comments

ಹಾವೇರಿ: 'ತಾಂಡಾದ ಮಹಿಳೆಯರಿಗೆ ಗರ್ಭಕೋಶ ಚಿಕಿತ್ಸೆ ಮಾಡಿರುವ ವೈದ್ಯ ಡಾ. ಶಾಂತಾ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಂತ್ರಸ್ತರಿಗೆ ವಿಶೇಷ ಪ್ಯಾಕೇಜ್ ನೀಡಬೇಕು' ಎಂದು ಒತ್ತಾಯಿಸಿ ಮುಖ್ಯಮಂತ್ರಿ ವಾಹನ ತಡೆದು ಪ್ರತಿಭಟನೆ ನಡೆಸಲು ಸಿದ್ಧರಾಗಿದ್ದ ಕೆಲ ಪ್ರತಿಭಟನಕಾರರನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ.

ಹುಬ್ಬಳ್ಳಿಯಿಂದ ರಸ್ತೆ ಮಾರ್ಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವರಗುಡ್ಡಕ್ಕೆ ಬರುತ್ತಿದ್ದಾರೆ. ಮಾರ್ಗ ಮಧ್ಯೆ ವಾಹನ ತಡೆದು ಮನವಿ ಸಲ್ಲಿಸಲು ಪ್ರತಿಭಟನಕಾರರು ನಿರ್ಧರಿಸಿದ್ದರು. ಇದಕ್ಕಾಗಿ ಸಿದ್ಧತೆ ಮಾಡಿಕೊಂಡಿದ್ದರು.

ಪ್ರತಿಭಟನೆ ಮಾಹಿತಿ ಅರಿತ ಪೊಲೀಸರು, ಕೆಲ ಪ್ರತಿಭಟನಕಾರರನ್ನು ವಶಕ್ಕೆ ಪಡೆದು ರಾಣೆಬೆನ್ನೂರು ಶಹರ ಠಾಣೆಯಲ್ಲಿ ಇರಿಸಿದ್ದಾರೆ.

ವಶಕ್ಕೆ ಪಡೆದ ಸುದ್ದಿ ತಿಳಿಯುತ್ತಿದ್ದಂತೆ ಉಳಿದ ಪ್ರತಿಭಟನಕಾರರು, ಅಜ್ಞಾತ ಸ್ಥಳಕ್ಕೆ ಹೋಗಿದ್ದಾರೆ.

'ಪೊಲೀಸರು ನಮ್ಮ ಪ್ರತಿಭಟನೆ ಹತ್ತಿಕ್ಕುತ್ತಿದ್ದಾರೆ. ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಹೋಗುತ್ತೇವೆ. ಅಲ್ಲಿಯೇ ಅವರಿಗೆ ಮನವಿ ಸಲ್ಲಿಸುತ್ತೇವೆ. ಮಹಿಳೆಯರಿಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ಕೇಳುತ್ತೇವೆ' ಎಂದು ಪ್ರತಿಭಟನಕಾರರು ಹೇಳಿದರು.

ಅಕ್ರಮವಾಗಿ ಗರ್ಭಕೋಶ ಚಿಕಿತ್ಸೆಗೆ ಒಳಗಾಗಿ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ 6 ಮಹಿಳೆಯರು ಈಗಾಗಲೇ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT