ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಕಾಂಕ್ಷಿ ನಾನಲ್ಲ, ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮುಂದುವರಿಸುವೆ: ಆನಂದಸ್ವಾಮಿ

Published 11 ಜೂನ್ 2024, 16:17 IST
Last Updated 11 ಜೂನ್ 2024, 16:17 IST
ಅಕ್ಷರ ಗಾತ್ರ

ಹಾವೇರಿ: ‘ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಆಕಾಂಕ್ಷಿ ನಾನಲ್ಲ. ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮುಂದುವರಿಸುತ್ತೇನೆ’ ಎಂದು ಹಾವೇರಿ–ಗದಗ ಲೋಕಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರು, ಜನರಿಂದ ದೊಡ್ಡ ಪ್ರಮಾಣದ ಆಶೀರ್ವಾದ ಕೊಡಿಸಿದ್ದಾರೆ. ಚುನಾವಣೆಯಲ್ಲಿ ಸೋಲು-ಗೆಲುವು ಸಹಜ. ಮತ ನೀಡಿದ ಎಲ್ಲರಿಗೂ ಧನ್ಯವಾದ’ ಎಂದರು.

‘ಹೊಂದಾಣಿಕೆ ರಾಜಕಾರಣ ನಡೆದಿಲ್ಲ. ನಡೆದಿದ್ದರೆ, ನನಗೆ ಹೆಚ್ಚು ಮತಗಳು ಬರುತ್ತಿರಲಿಲ್ಲ. ನಗರ ಪ್ರದೇಶದಲ್ಲಿ ಬಿಜೆಪಿಗೆ ಹೆಚ್ಚು ಮತಗಳು ಸಿಕ್ಕಿವೆ. ಕಳೆದ ಚುನಾವಣೆಯಲ್ಲಿ ಗದಗನಲ್ಲಿ ಕಡಿಮೆ ಮತಗಳು ಬಂದಿದ್ದವು. ಈ ಬಾರಿ 16 ಸಾವಿರ ಮತಗಳ ಅಂತರವಾಗಿದೆ’ ಎಂದು ತಿಳಿಸಿದರು.

‘ಲೋಕಸಭಾ ಚುನಾವಣೆಯಲ್ಲಿ ಶಿಗ್ಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ಮತಗಳು ಬಂದಿವೆ. ಮುಂದಿನ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹ ನಾಯಕರು, ಕ್ಷೇತ್ರದಲ್ಲಿದ್ದಾರೆ. ನಾನು ಯಾವುದೇ ಆಕಾಂಕ್ಷಿಯಲ್ಲ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT