ಶನಿವಾರ, 2 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರೇಕೆರೂರು | ಅಪೌಷ್ಟಿಕತೆ ನಿವಾರಣೆಗೆ ಪೋಷಣ ಅಭಿಯಾನ- ಜಯಶ್ರೀ ಪಾಟೀಲ

Published 25 ಸೆಪ್ಟೆಂಬರ್ 2023, 14:04 IST
Last Updated 25 ಸೆಪ್ಟೆಂಬರ್ 2023, 14:04 IST
ಅಕ್ಷರ ಗಾತ್ರ

ಹಿರೇಕೆರೂರು: ಗರ್ಭಿಣಿ ಮಹಿಳೆಯರಲ್ಲಿ ಮತ್ತು ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರವು 2018ರ ಸೆಪ್ಟೆಂಬರ್‌ನಲ್ಲಿ ‘ಪೋಷಣ ಅಭಿಯಾನ’ವನ್ನು ಆರಂಭಿಸಿದೆ ಎಂದು ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಜಯಶ್ರೀ ಪಾಟೀಲ ಹೇಳಿದರು.

ತಾಲ್ಲೂಕಿನ ಆಲದಗೇರಿ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ‘ಪೋಷಣ ಅಭಿಯಾನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗರ್ಭಧಾರಣೆಯಿಂದ ಹಿಡಿದು ಶಿಶು ಮತ್ತು ತಾಯಂದಿರಿಗೆ ನಿತ್ಯ ಉತ್ತಮ ಪೌಷ್ಟಿಕ ಆಹಾರ ನೀಡಿ, ಆರೋಗ್ಯವಂತರನ್ನಾಗಿಸುವ ಉದ್ದೇಶದಿಂದ ಈ ಅಭಿಯಾನ ಜಾರಿಗೆ ತರಲಾಗಿದೆ ಎಂದರು.

ಗ್ರಾ.ಪಂ.ಅಧ್ಯಕ್ಷೆ ರತ್ನವ್ವ ಕೊರವರ, ಗ್ರಾ.ಪಂ.ಉಪಾಧ್ಯಕ್ಷೆ ಸುನಂದಮ್ಮ ಬಂಗೇರ, ಸಹಾಯಕ ಶಿಶು ಯೋಜನಾ ಅಭಿವೃದ್ಧಿ ಯೋಜನಾಧಿಕಾರಿ ಗೀತಾ ಬಾಳಿಕಾಯಿ, ಸುಮಾ ಮಾಳಮ್ಮನವರ, ಪುಷ್ಪ ಬಾದಾಮಿ, ಜೋತಿ, ವಸಂತ ಬಡಿಗೇರ, ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT