ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರ ಛಾಪು: ಎಸ್.ಎಚ್. ರೇಣುಕಾದೇವಿ

Last Updated 10 ಮಾರ್ಚ್ 2021, 14:58 IST
ಅಕ್ಷರ ಗಾತ್ರ

ಹಾವೇರಿ: ‘ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಪುರುಷರಿಗೆ ಸಮಾನರಾಗಿ ಬುದ್ಧಿಶಕ್ತಿ ಮತ್ತು ಸಾಮರ್ಥ್ಯವನ್ನು ಪ್ರದರ್ಶಿಸುತ್ತಿದ್ದಾರೆ. ಸಮಾಜದ ಎಲ್ಲ ರಂಗಗಳಲ್ಲಿಯೂ ಮಹಿಳೆಯರು ಮುಂಚೂಣಿಯಲ್ಲಿದ್ದಾರೆ’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಎಸ್.ಎಚ್. ರೇಣುಕಾದೇವಿ ಹೇಳಿದರು.

ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಭವನದಲ್ಲಿ ಈಚೆಗೆ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿ ಹೆಣ್ಣು ತಾಯಿಯಾಗಿ, ಮಗಳಾಗಿ, ಅಕ್ಕ-ತಂಗಿಯಾಗಿ, ಮಡದಿಯಾಗಿ ಕಷ್ಟ ಸುಖವನ್ನು ಸಮನಾಗಿ ಸ್ವೀಕರಿಸಿ ಜೀವನ ಸಾಗಿಸುತ್ತ ಸಮಾಜದ ಮುಖ್ಯವಾಹಿನಿಗೆ ಬರುತ್ತಿದ್ದಾಳೆ ಎಂದು ಹೇಳಿದರು.

ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಕೆ.ಸಿ. ಪಾವಲಿ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ದಿನಾಚರಣೆಯ ಅಂಗವಾಗಿ ನ್ಯಾಯಾಲಯದ ಮಹಿಳಾ ಸಿಬ್ಬಂದಿಗೆ ಅಭಿಯೋಜನಾ ಇಲಾಖೆ ಹಾಗೂ ಜಿಲ್ಲಾ ನ್ಯಾಯವಾದಿಗಳ ಸಂಘದ ಮಹಿಳಾ ವಕೀಲರಿಗೆ ಆಯೋಜಿಸಿದ್ದ ‘ಪಿಕ್‌ ಆ್ಯಂಡ್‌ ಆ್ಯಕ್ಟ್‌’ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ವಿತರಣೆ ಮಾಡಲಾಯಿತು.

ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಜ್ಯೋತಿಶ್ರೀ ಕೆ.ಎಸ್, ಪ್ರಧಾನ ಕೌಟುಂಬಿಕ ನ್ಯಾಯಾಧೀಶರಾದ ಕಿರಣ ಕಿಣಿ, ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಈ. ರಾಜೀವಗೌಡ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಲಕ್ಷ್ಮೀ ಎನ್.ಗರಗ, ಸರ್ಕಾರಿ ಅಭಿಯೋಜಕರಾದ ಸರೋಜ ಕೂಡಲಮಠ, ಜಿಲ್ಲಾ ಕಾನೂನು ಪ್ರಾಧಿಕಾರದ ಪ್ರಭಾರ ಸದಸ್ಯ ಕಾರ್ಯದರ್ಶಿಗಳಾದ ವಾಸುದೇವ ಆರ್.ಗುಡಿ, ನ್ಯಾಯವಾದಿಗಳ ಸಂಘದ ಕಾರ್ಯದರ್ಶಿ ಪಿ.ಎಂ.ಬೆನ್ನೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT