ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ಉದ್ಯಮಿ ಸಂತೆಗೆ ಚಾಲನೆ

Last Updated 29 ಜನವರಿ 2021, 14:31 IST
ಅಕ್ಷರ ಗಾತ್ರ

ಹಾವೇರಿ:ದೇಶಪಾಂಡೆ ಫೌಂಡೇಶನ್‍ನ ವತಿಯಿಂದ ನಗರದ ಜಿಲ್ಲಾ ಗುರುಭವನದಲ್ಲಿ ಆಯೋಜಿಸಿರುವ ‘ಉದ್ಯಮಿ ಸಂತೆ’ಯನ್ನು ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ಪ್ರಭುದೇವ ಅವರು ಶುಕ್ರವಾರ ಉದ್ಘಾಟಿಸಿದರು.

ಉದ್ಯಮಿ ಸಂತೆಯಲ್ಲ್ಲಿ ಸೀರೆ, ಉಡುಪು, ಗೃಹ ಆಲಂಕಾರಿಕ ವಸ್ತುಗಳು, ಆಹಾರ ಪದಾರ್ಥಗಳು, ಸಾವಯವ ಪದಾರ್ಥಗಳು, ವಿವಿಧ ಬಗೆಯ ತಿಂಡಿಗಳು, ಸಿರಿಧಾನ್ಯಗಳು ಮತ್ತು ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟವನ್ನು ಅತಿಥಿಗಳು ವೀಕ್ಷಿಸಿದರು. ಉದ್ಯಮಿ ಸಂತೆಯು ಜ.31ರವರೆಗೆ ಬೆಳಿಗ್ಗೆ 10.30ರಿಂದ ರಾತ್ರಿ 9ರವರೆಗೆ ಹಮ್ಮಿಕೊಳ್ಳಲಾಗಿದೆ.

‘ಇಲ್ಲಿಯವರೆಗೆ ಸುಮಾರು 90ಕ್ಕೂ ಅಧಿಕ ಸಂತೆಗಳನ್ನು ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಆಯೋಜಿಸುವ ಮುಖಾಂತರ ಸಣ್ಣ ಉದ್ಯಮಿಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುತ್ತಿದೆ’ ಎಂದು ದೇಶಪಾಂಡೆ ಫೌಂಡೇಷನ್‌ನ ಸಿಬ್ಬಂದಿ ಮಾಹಿತಿ ನೀಡಿದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ವಿನಾಯಕ ಜೋಶಿ, ನಬಾರ್ಡ್‌ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕಎಂ.ಎಂ. ಕೀರ್ತಿ, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ ಸಹಾಯಕ ಪ್ರಬಂಧಕ ನಾರಾಯಣ ಯಾಜಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT