ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ | ಬ್ಯಾಡಗಿ ಮೆಣಸಿನಕಾಯಿ ಆವಕದಲ್ಲಿ ಮತ್ತೆ ಹೆಚ್ಚಳ

Published 8 ಆಗಸ್ಟ್ 2023, 15:37 IST
Last Updated 8 ಆಗಸ್ಟ್ 2023, 15:37 IST
ಅಕ್ಷರ ಗಾತ್ರ

ಬ್ಯಾಡಗಿ: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆಗೆ ಮಂಗಳವಾರ 3,017 ಕ್ವಿಂಟಲ್ ಮೆಣಸಿನಕಾಯಿ ಮಾರಾಟಕ್ಕೆ ತರಲಾಗಿದ್ದು, ಆವಕದಲ್ಲಿ ಮತ್ತೆ ಹೆಚ್ಚಳವಾಗಿದೆ.

ಕಳೆದ ಸೋಮವಾರ ಮಾರುಕಟ್ಟೆಗೆ 1,615 ಕ್ವಿಂಟಲ್ ಮೆಣಸಿನಕಾಯಿ ಆವಕವಾಗಿತ್ತು. ಮಂಗಳವಾರ ತೇವಾಂಶ ಹೆಚ್ಚಿರುವ ಹಾಗೂ ಕನಿಷ್ಢ ಗುಣಮಟ್ಟ ಹೊಂದಿರದ 32 ಲಾಟ್‌ಗಳಿಗೆ ಟೆಂಡರ್ ನಮೂದಿಸಿಲ್ಲ. 10 ಚೀಲ ಬ್ಯಾಡಗಿ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹56,500ರಂತೆ, 25 ಚೀಲ ಕಡ್ಡಿ ಮೆಣಸಿನಕಾಯಿ ₹51,129ರಂತೆ ಹಾಗೂ ಗುಂಟೂರ ತಳಿ ₹18,729ರಂತೆ ಗರಿಷ್ಠ ಬೆಲೆಯಲ್ಲಿ ಮಾರಾಟವಾಗಿವೆ.

ಸರಾಸರಿ ಬೆಲೆಯಲ್ಲಿ ಬ್ಯಾಡಗಿ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹40,509, ಕಡ್ಡಿ ಮೆಣಸಿನಕಾಯಿ ₹31,269 ಹಾಗೂ ಗುಂಟೂರು ತಳಿ ₹16,509ರಂತೆ ಮಾರಾಟವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT