ಹಾವೇರಿ: 75ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಆ.15ರಂದು ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಬೆಳಿಗ್ಗೆ 9 ಗಂಟೆಗೆ ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಬೆಳಿಗ್ಗೆ 7.45 ಗಂಟೆಗೆ ಎಲ್ಲ ಗಣ್ಯರು ಹಾಗೂ ಅಧಿಕಾರಿಗಳು ಹುತಾತ್ಮ ಮೈಲಾರ ಮಹಾದೇವ ವೃತ್ತದಲ್ಲಿರುವ ಹುತಾತ್ಮ ಮೈಲಾರ ಮಹಾದೇವರ ಪ್ರತಿಮೆಗೆ ಮಾರ್ಲಾಪಣೆ, ಬೆಳಿಗ್ಗೆ 9 ಗಂಟೆಗೆ ಹೊಸಮನಿ ಸಿದ್ದಪ್ಪ ಕ್ರೀಡಾಂಗಣದಲ್ಲಿ ಸಚಿವರಿಂದ ರಾಷ್ಟ್ರ ಧ್ವಜಾರೋಹಣ, ಬೆಳಿಗ್ಗೆ 9.05ಕ್ಕೆ ಪಥ ಪರಿವೀಕ್ಷಣೆ, 9.15ಕ್ಕೆ ಪಥ ಸಂಚಲನ, 9.30ಕ್ಕೆ ಸಚಿವರಿಂದ ಸ್ವಾತಂತ್ರ್ಯೋತ್ಸವ ಸಂದೇಶ ಕಾರ್ಯಕ್ರಮ ನಡೆಯಲಿವೆ.

ಶಾಸಕ ನೆಹರು ಓಲೇಕಾರ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕರು, ಸಂಸದ, ವಿಧಾನ ಪರಿಷತ್ ಸದಸ್ಯರು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ.

ಕೋವಿಡ್ ಮಾರ್ಗಸೂಚಿ ಅನ್ವಯ ಸರಳವಾಗಿ ಸ್ವಾತಂತ್ರ್ಯೋತ್ಸವ ಹಮ್ಮಿಕೊಳ್ಳಲಾಗಿದೆ. 10 ವರ್ಷಕ್ಕಿಂತ ಕಡಿಮೆ ವಯೋಮಾನ ಹಾಗೂ 60 ವರ್ಷಕ್ಕಿಂತ ಮೇಲ್ಪಟ್ಟ ವಯೋಮಾನದವರು ಭಾಗವಹಿಸುವಂತಿಲ್ಲ.ಸಮಾರಂಭದಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕ್ರೀಡಾಂಗಣದಲ್ಲಿ ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವಂತೆ ಆಸನ ವ್ಯವಸ್ಥೆ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಹಾಗೂ ಜ್ವರ ತಪಾಸಣೆ ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.